ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ.

ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಯೋಜನೆಯ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಂದು ಬೆಳಗ್ಗೆ ನೂರಕ್ಕೂ ಹೆಚ್ಚು ಅಧಿಕಾರಿಗಳು ಸತ್ಯಪಾಲ್ ಮಲಿಕ್ ನಿವಾಸ, ಕಚೇರಿ ಸೇರಿದಂತೆ ವಿವಿಧ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ ₹2,220 ಕೋಟಿ ಮೌಲ್ಯದ ಯೋಜನೆಯಾಗಿದೆ. ಕಾಮಗಾರಿ ಗುತ್ತಿಗೆ ನೀಡುವಾಗ ಅಕ್ರಮಗಳು ನಡೆದಿವೆ ಎಂದು ಸತ್ಯಪಾಲ್ ಮಲಿಕ್ ಸೇರಿದಂತೆ ಇತರೆ ಐವರ ವಿರುದ್ಧ ಸಿಬಿಐ ಅಧಿಕಾರಿಗಳು 2022ರಲ್ಲಿ ದೂರು ದಾಖಲಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸತ್ಯಪಾಲ್ ಮಲಿಕ್ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಎರಡು ಪೈಲ್‌ಗಳನ್ನು ತೆರವುಗೊಳಿಸಲು ₹ 300 ಕೋಟಿ ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.