ನವದೆಹಲಿ:ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಸ್ಥಳೀಯರು, ಸ್ವಯಂಸೇವಾ ಸಂಸ್ಥೆಗಳು ಶಾಲಾ ಮಕ್ಕಳಿಗೆ ನೀಡುವ ಆಹಾರ ಪದಾರ್ಥ ಮತ್ತು ತಿನಿಸುಗಳ ಬಗ್ಗೆ ಪ್ರತ್ಯೇಕ ದಾಖಲಾತಿಯನ್ನು ನಿರ್ವಹಿಸಿ ಎಂದು ಕರ್ನಾಟಕವೂ ಸೇರಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ನಡೆಸುತ್ತಿರುವ 11 ರಾಜ್ಯಗಳಿಗೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ.

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿರುವುದು ಇದೇ ಮೊದಲು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ನಿರ್ದೇಶನವನ್ನು ನೀಡಿದೆ. ಎಲ್ಲಾ ರಾಜ್ಯಗಳೂ ಇಂತಹ ಯೋಜನೆ ಜಾರಿಗೆ ತರಬೇಕು ಎಂದು ಸಚಿವಾಲಯವು ಅಭಿಪ್ರಾಯಪಟ್ಟಿದೆ.

ನಿರ್ದೇಶನಗಳು
* ಆಗತಾನೇ ಸಿದ್ಧಪಡಿಸಿದ ಆಹಾರ ಪದಾರ್ಥಗಳನ್ನಷ್ಟೇ ವಿದ್ಯಾರ್ಥಿಗಳಿಗೆ ನೀಡಬೇಕು

* ಪ್ಯಾಕ್ ಮಾಡಲಾದ ಪದಾರ್ಥ/ತಿನಿಸುಗಳಾಗಿದ್ದರೆ ಅವುಗಳ ಎಕ್ಸ್‌ಪೈರಿ ದಿನಾಂಕವನ್ನು ಕಡ್ಡಾಯವಾಗಿ ಪರಿಶೀಲಿಸಬೇಕು

* ಹಣ್ಣುಗಳನ್ನು ನೀಡುವುದಾದರೆ ಅವುಗಳು ತಾಜಾ ಆಗಿರಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.