ನವದೆಹಲಿ: ಮಾದಿಗ ಸಮುದಾಯ ಸೇರಿದಂತೆ ಇತರ ಪರಿಶಿಷ್ಟ ಜಾತಿಗಳ ಹಿತಾಸಕ್ತಿಗಳನ್ನು ಕಾಪಾಡಲು ತೆಗೆದುಕೊಳ್ಳಬಹುದಾದ ಆಡಳಿತಾತ್ಮಕ ಕ್ರಮಗಳನ್ನು ಪರಿಶೀಲಿಸಲು ರಚನೆಯಾಗಿರುವ ಉನ್ನತ ಮಟ್ಟದ ಸಮಿತಿಯು ಶುಕ್ರವಾರ ಎರಡನೇ ಸಭೆ ನಡೆಸಿತು. ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಮಾದಿಗ ಸಮುದಾಯದ ನಿಯೋಗವು ಸಮಿತಿಗೆ ಅಹವಾಲು ಸಲ್ಲಿಸಿತು.

ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ‘ಪರಿಶಿಷ್ಟ ಜಾತಿಗಳ ವರ್ಗೀಕರಣದ ಬೇಡಿಕೆಗೆ ಸಂಬಂಧಿಸಿದಂತೆ ಮಾದಿಗರ ಸಬಲೀಕರಣಕ್ಕಾಗಿ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಅಳವಡಿಸಿಕೊಳ್ಳಲು ಕೇಂದ್ರವು ಶೀಘ್ರದಲ್ಲೇ ಸಮಿತಿ ರಚಿಸಲಿದೆ’ ಎಂದು ಹೇಳಿದ್ದರು. ಪ್ರಧಾನಿ ನಿರ್ದೇಶನದ ಮೇರೆಗೆ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಮಾದಿಗ ಸಮುದಾಯದ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳು ಮತ್ತು ಸಮುದಾಯದವರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನಿಯೋಗವು ಸಮಿತಿಗೆ ಮಾಹಿತಿ ನೀಡಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ಮಾದಿಗ ಮತ್ತು ಇತರ ಸಮಾನ ಸ್ಥಾನಮಾನದ ಸಮುದಾಯಗಳಿಗೆ ಸಮಾನವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿತು.

‘ಸಮಾಜದ ವಿವಿಧ ವರ್ಗಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಮಾದಿಗರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಮಿತಿಯು ನಿಯೋಗಕ್ಕೆ ಭರವಸೆ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.