ನವದೆಹಲಿ:ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ (ಡಿ.ಎ) ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.

ತುಟ್ಟಿಭತ್ಯೆ ಶೇ 17ರಿಂದ ಶೇ.28ಕ್ಕೆ ಹೆಚ್ಚಿಸಿರುವುದಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರಕಟಿಸಿದರು.

2021ರ ಜುಲೈ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗಲಿದೆ.ಕೇಂದ್ರ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 28ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು ₹34,400 ಕೋಟಿ ವೆಚ್ಚವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ 48,34,000 ನೌಕರರು ಹಾಗೂ 65,26,000 ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.