ಇಟಾ ನಗರ: ಗಡಿ ರಕ್ಷಣೆಯಲ್ಲಿ ಮಹತ್ವದ್ದಾಗಿರುವ, ಅರುಣಾಚಲ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ ₹1,782 ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ‘ಸಿಯಾಂಗ್ ಜಿಲ್ಲೆಯ ಪಂಗೊದಿಂದ ಜೋರ್ಗಿಂಗ್‌ವರೆಗೆ 82 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಯೋಜನೆಗೆ ಅನುಮತಿ ನೀಡಲಾಗಿದೆ’ ಎಂದಿದ್ದಾರೆ.

‘ಎರಡು ಹಂತಗಳಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಈ ಯೋಜನೆಯು ಸುಗಮ ಮತ್ತು ಸುರಕ್ಷತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತದೆ. ಆ ಭಾಗದ ಗ್ರಾಮಗಳ ಸಂಪರ್ಕವನ್ನು ವಿಸ್ತರಿಸುತ್ತದೆ. ಗುಡ್ಡಗಾಡು ಪ್ರದೇಶದ ಸಾಮಾಜಿಕ– ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದ್ದಿದ್ದಾರೆ.

‘ಕಡಿದಾದ ಈ ರಸ್ತೆಯು ಸೇನಾ ಪಡೆಗಳ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸುತ್ತದೆ ಮತ್ತು ಗಡಿಭಾಗಕ್ಕೆ ಸುಲಭವಾಗಿ ತಲುಪಲು ಸಹಾಯಕವಾಗುತ್ತದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.