ಬೆಂಗಳೂರು: ಡೆಲ್ಟಾ ಪ್ಲಸ್ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರವು ಅನ್ಲಾಕ್ ಪ್ರಕ್ರಿಯೆಯನ್ನು ನಿಧಾನಗೊಳಿಸಿದ್ದು, ಇದರ ಬೆನ್ನಲ್ಲೇ, ಕೇಂದ್ರ ಆರೋಗ್ಯ ಸಚಿವಾಲಯವು ‘ಡೆಲ್ಟಾ ಪ್ಲಸ್’ ರೂಪಾಂತರದ ಉಲ್ಬಣಗೊಳ್ಳುವ ಬಗ್ಗೆ ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದೆ.

ಕೋವಿಡ್ -19 ರ ಹೊಸ ರೂಪಾಂತರವು ಪತ್ತೆಯಾದ ಜಿಲ್ಲೆಗಳಲ್ಲಿ ಜನಸಂದಣಿ ಮತ್ತು ಒಟ್ಟುಗೂಡುವ ಕಾರ್ಯಕ್ರಮಗಳಿಗೆ ತಡೆ ಹಾಕುವಂತೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ನೀಡಿದ ಮಾಹಿತಿಯಲ್ಲಿ ಕೇಂದ್ರವು ‘ಸಾರ್ವಜನಿಕ ಆರೋಗ್ಯ ಜಾಗೃತಿಯು ಹೆಚ್ಚು ಕೇಂದ್ರೀಕೃತ ಮತ್ತು ಕಠಿಣವಾಗಬೇಕಿದೆ’ಎಂದು ಹೇಳಿದ್ದಾರೆ. ‘ಜನಸಂದಣಿ, ಪರಸ್ಪರ ಬೆರೆಯುವುದನ್ನು ತಡೆಯುವುದು, ವ್ಯಾಪಕವಾದ ಪರೀಕ್ಷೆ, ಟ್ರೇಸಿಂಗ್ ಮತ್ತು ಹೆಚ್ಚು ಲಸಿಕೆ ವಿತರಣೆಗೆ ಆದ್ಯತೆಯ ಆಧಾರದ ಮೇಲೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಿ’ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಹೊರತಾಗಿ, ಕೇಂದ್ರವು ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೂ ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ನೀಡಿದೆ. ಕ್ಲಿನಿಕಲ್ ಎಪಿಡೆಮಿಯೋಲಾಜಿಕಲ್ ಪರಸ್ಪರ ಸಂಬಂಧಗಳ ಸ್ಥಾಪನೆಗಾಗಿ ಡೆಲ್ಟಾ ಪ್ಲಸ್ ಪ್ರಕರಣಗಳ ಮಾದರಿಗಳನ್ನು INSACOGನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲು ರಾಜ್ಯಗಳಿಗೆ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.