ನವದೆಹಲಿ: ಕೇಂದ್ರ ಸರ್ಕಾರವು ನವೆಂಬರ್ 8ರಿಂದ ಅನ್ವಯವಾಗುವಂತೆ ತನ್ನ ಎಲ್ಲ ಹಂತದ ಸಿಬ್ಬಂದಿಗೆ ಬಯೊಮೆಟ್ರಿಕ್ ಕ್ರಮದಲ್ಲಿ ಹಾಜರಾತಿ ಪಡೆಯುವ ವ್ಯವಸ್ಥೆಯನ್ನು ಮರುಜಾರಿಗೊಳಿಸಲು ತೀರ್ಮಾನಿಸಿದೆ.

ಬಯೊಮೆಟ್ರಿಕ್ ಮಷೀನ್ ಬಳಿ ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದು ಆಯಾ ಇಲಾಖೆಗಳ ಮುಖ್ಯಸ್ಥರ ಹೊಣೆಗಾರಿಕೆ. ಸಿಬ್ಬಂದಿ ಹಾಜರಾತಿ ನೀಡುವ ಮೊದಲು ಕೈಗಳನ್ನು ಸ್ವಚ್ಛಪಡಿಸಿಕೊಳ್ಳಬೇಕು ಎಂದೂ ಕೇಂದ್ರ ಸಿಬ್ಬಂದಿ ಸಚಿವಾಲಯವು ತಿಳಿಸಿದೆ.

ಕೋವಿಡ್ ಕಾರಣದಿಂದಾಗಿ ಸಿಬ್ಬಂದಿಗೆ ಇದುವರೆಗೂ ಬಯೊಮೆಟ್ರಿಕ್ ಕ್ರಮದಲ್ಲಿ ಹಾಜರಾತಿ ನೀಡುವುದರಿಂದ ವಿನಾಯಿತಿ ನೀಡಲಾಗಿತ್ತು. ಸಿಬ್ಬಂದಿಯು ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು ಅಗತ್ಯ. ದಟ್ಟಣೆಯನ್ನು ತಪ್ಪಿಸಲು ಅಗತ್ಯವಿದ್ದರೆ ಹೆಚ್ಚುವರಿ ಮಷೀನ್ ಅನ್ನು ಅಳವಡಿಸಬೇಕು ಎಂದು ಸಚಿವಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಕೆಲಸದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯ. ಕಚೇರಿ ಸಭೆಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಮುಂದುವರಿಸಬಹುದು. ಅನಗತ್ಯ ಎಂದಾದಲ್ಲಿ ವ್ಯಕ್ತಿಗತ ಭೇಟಿಯನ್ನು ಸಾರ್ವಜನಿಕ ಹಿತಾಸಕ್ತಿಯಿಂದ ಕೈಬಿಡಬೇಕು. ಎಲ್ಲ ಸಿಬ್ಬಂದಿಯು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.