ಇಂಫಾಲ್: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಪ್ರಮುಖ ಸಭೆಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಗುರುವಾರ ಹೇಳಿದ್ದಾರೆ.

ಆದರೆ, ಅವರು ಸಭೆಯ ವಿವರಗಳನ್ನು ಬಹಿರಂಗಪಡಿಸಿಲ್ಲ.

ಸಂಘರ್ಷದಲ್ಲಿ ಪಾಲ್ಗೊಂಡಿರುವ ಗುಂಪುಗಳ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸುವ ನಿಟ್ಟಿನಲ್ಲಿ ಹಾಗೂ ಮಾತುಕತೆ ಏರ್ಪಡಿಸಲು ಪ್ರಯತ್ನಗಳು ನಡೆಯುತ್ತಿವೆ. ಸಾಮೂಹಿಕ ಪ್ರಯತ್ನಗಳ ಫಲವಾಗಿ ರಾಜ್ಯದಲ್ಲಿ ಶಾಂತಿ ನೆಲೆಸುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.

ಮೀಸಲಾತಿ ವಿಚಾರವಾಗಿ ಕುಕಿ ಹಾಗೂ ಮೈತೇಯಿ ಬುಡಕಟ್ಟು ಸಮುದಾಯಗಳ ನಡುವೆ ಕಳೆದ ವರ್ಷ ಮೇ ತಿಂಗಳಲ್ಲಿ ಆರಂಭವಾದ ಹಿಂಸಾಚಾರದಿಂದಾಗಿ ಇದುವರೆಗೆ 200 ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ನೂರಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. 60,000ಕ್ಕೂ ಹೆಚ್ಚು ಜನರು ಮನೆಗಳನ್ನು ತೊರೆದಿದ್ದಾರೆ.
.ಮಣಿಪುರ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ದೋಚಿದ ಗುಂಪು .Manipur Violence | ಮಣಿಪುರ ಸಚಿವರ ನಿವಾಸದ ಮೇಲೆ ಗ್ರೆನೇಡ್ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.