ನವದೆಹಲಿ: ದೆಹಲಿ–ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತಗ್ಗಿಸಲು ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದೆಲ್ಲ ಲಾರಿಗಳಿಗೆ ರಾಷ್ಟ್ರರಾಜಧಾನಿ ಪ್ರವೇಶವನ್ನು ನಿಷೇಧಿಸವುದು, ಶಾಲೆಗಳನ್ನು ಮುಚ್ಚುವುದು ಮತ್ತು ದೆಹಲಿ ಸರ್ಕಾರಿ ಕಚೇರಿಗಳಲ್ಲಿ (ಜಿಎನ್‌ಸಿಟಿಡಿ) ಶೇ 50ರಷ್ಟು ಸಿಬ್ಬಂದಿಗೆ ಅವಕಾಶ ನೀಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದೆ.

ಈ ಸಂಬಂಧ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗಳ ಸಭೆಯನ್ನು ಮಂಗಳವಾರ ನಡೆಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠಕ್ಕೆ ತಿಳಿಸಿದರು.

ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆಯನ್ನೂ ಪರಿಶೀಲಿಸಲಾಯಿತು. ಆದರೆ ಕೇಂದ್ರ ಸರ್ಕಾರಿ ಅಧಿಕಾರಿಗಳು ಬಳಸಲಾಗುವ ಒಟ್ಟು ವಾಹನಗಳು ಸಂಖ್ಯೆ ಅಷ್ಟು ದೊಡ್ಡದೇನಲ್ಲ. ಹಾಗಾಗಿ ಮನೆಯಿಂದ ಕೆಲಸ ಮಾಡುವ ಬದಲು ನಾವು ವಾಹನಗಳ ಪೂಲಿಂಗ್ ಮತ್ತು ಹಂಚಿಕೆಯ ಕುರಿತು ಸಲಹೆ ನೀಡಿದ್ದೇವೆ ಎಂದು ಮೆಹ್ತಾ ಅವರು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರೂ ಇರುವ ಪೀಠಕ್ಕೆ ತಿಳಿಸಿದರು.

ಬುಧವಾರ ಬೆಳಿಗ್ಗೆ ದೆಹಲಿ–ಎನ್‌ಸಿಆರ್ ಪ್ರದೇಶದ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, ಭಾನುವಾರದಿಂದ ಇಲ್ಲಿವರೆಗೂ ಅಂಥ ಸುಧಾರಣೆ ಕಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.