ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಂಡಿದೆ.

ಪಶ್ಚಿಮ ಬಂಗಾಳದಿಂದ ವಾಪಸ್ ಕರೆಸಿಕೊಂಡಿರುವ ಅವರನ್ನು ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವಾಲಯಕ್ಕೆ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಅಲಪನ್ ಬಂಡೋಪಾಧ್ಯಾಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಯಸ್ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಬಳಿಕ ಕೇಂದ್ರ ಸರ್ಕಾರ ಕರೆದಿದ್ದ ಪುನರ್ ಪರಿಶೀಲಿನೆ ಸಭೆಗೆಅವರು ಗೈರಾಗಿದ್ದರು. ಅವರ ಈ ನಡೆ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟುಮಾಡಿತ್ತು.

ಅಲಪನ್ ಬಂಡೋಪಾಧ್ಯಾಯ ಅವರ ಅಧಿಕಾರವಧಿ ಕಳೆದ ಮೇ 24ಕ್ಕೆ ಕೊನೆಗೊಂಡಿತ್ತು. ಕೋರಿಕೆಯ ಮೇರೆಗೆ ಅವರ ಸೇವಾವಧಿಯನ್ನು ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿತ್ತು. ಇದಾಗಿ ನಾಲ್ಕೇ ದಿನಕ್ಕೆ ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿಕೊಂಡಿದೆ.

ಅಲಪನ್ ಬಂಡೋಪಾಧ್ಯಾಯ ಅವರ ಮಮತಾ ಬ್ಯಾನರ್ಜಿ ಅವರಿಗೆ ಆಪ್ತರಾಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.