ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

IAS ಸೇವೆಯಿಂದ ಪೂಜಾ ಖೇಡ್ಕರ್ ಅವರನ್ನು ವಜಾಗೊಳಿಸಿದ ಕೇಂದ್ರ

Published : 7 ಸೆಪ್ಟೆಂಬರ್ 2024, 14:30 IST
Last Updated : 7 ಸೆಪ್ಟೆಂಬರ್ 2024, 14:30 IST
ಫಾಲೋ ಮಾಡಿ
Comments

ನವದೆಹಲಿ: ಕೇಂದ್ರ ಸರ್ಕಾರವು ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್‌) ವಜಾಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸುಳ್ಳು ದಾಖಲೆ ನೀಡಿದ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರದ್ದುಗೊಳಿಸಿದ ಒಂದು ತಿಂಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಎಲ್ಲ ಆರೋಪಗಳನ್ನು ಪೂಜಾ ನಿರಾಕರಿಸಿದ್ದಾರೆ.

ಪುಣೆಯಲ್ಲಿ ತರಬೇತಿಯಲ್ಲಿದ್ದ ವೇಳೆ ಪೂಜಾ ತಮ್ಮ ಅಧಿಕಾರ ಹಾಗೂ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಸಹ ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿತ್ತು.

ಏತನ್ಮಧ್ಯೆ, ನಕಲಿ ಅಂಗವೈಕಲ್ಯ ವೈದ್ಯಕೀಯ ಪ್ರಮಾಣಪತ್ರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಏಮ್ಸ್ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಾನು ತಯಾರಿದ್ದೇನೆ ಎಂದು ದೆಹಲಿ ಹೈಕೋರ್ಟ್‌ಗೆ ಪೂಜಾ ಖೇಡ್ಕರ್ ತಿಳಿಸಿದ್ದರು.

ಯುಪಿಎಸ್‌ಸಿ ದೂರಿನ ಮೇರೆಗೆ ದೆಹಲಿ ಪೊಲೀಸರ ತನಿಖೆ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT