ನವದೆಹಲಿ: ರಾಷ್ಟ್ರೀಯ ಕೋವಿಡ್ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಪೂರೈಕೆಗಾಗಿ ಕೋವಿಡ್ ಲಸಿಕೆಗಳನ್ನು ಖರೀದಿಸಲು ಭಾರತ ಸರ್ಕಾರ ಇಲ್ಲಿಯವರೆಗೆ ₹36,397.65 ಕೋಟಿ ವೆಚ್ಚ ಮಾಡಿದೆ ಎಂದು ಆರೋಗ್ಯ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

2024 ಜುಲೈ 29ರ ಮಾಹಿತಿಯಂತೆ ದೇಶದಾದ್ಯಂತ ಒಟ್ಟು 220.68 ಕೋಟಿ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ ಎಂದು ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಅಲ್ಲದೇ ಭಾರತವು 99 ದೇಶಗಳಿಗೆ ಮತ್ತು ವಿಶ್ವಸಂಸ್ಥೆಗೆ ಒಟ್ಟು 3012.465 ಲಕ್ಷ ಕೋವಿಡ್-19 ಲಸಿಕೆಗಳನ್ನು ರವಾನಿಸಿದೆ ಎಂದು ಜಾಧವ್ ಹೇಳಿದ್ದಾರೆ.

ಕೋವಿಡ್ -19 ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಸುಮಾರು ₹60 ಕೋಟಿ ಖರ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
.ಕೋವಿಡ್–19 ಲಸಿಕೆ: ವಿಜ್ಞಾನಿಗಳಾದ ಕಾರಿಕೊ, ವೈಸ್ಮೆನ್ರಿಗೆ ನೊಬೆಲ್ ಪುರಸ್ಕಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.