ವಯನಾಡು (ಕೇರಳ): ವಯನಾಡು ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕೆಂಬ ಬೇಡಿಕೆಯನ್ನು ಕಾನೂನಿನ ಅಂಶಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

ಭೂಕುಸಿತ ಸಂಭವಿಸಿರುವ ವಯನಾಡು ಜಿಲ್ಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶಗಳಲ್ಲಿ ಉಂಟಾಗಿರುವ ಭೂಕುಸಿತದ ಮೌಲ್ಯಮಾಪನದ ಬಳಿಕ ಕೇಂದ್ರ ಸರ್ಕಾರವು ಕಾನೂನು ಅಂಶಗಳನ್ನು ಪರಿಶೀಲಿಸಲಿದೆ. ಭೂಕುಸಿತ ಪರಿಣಾಮ ಕುರಿತು ಅಧ್ಯಯನ ನಡೆಸಬೇಕಾಗಿದೆ’ ಎಂದು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಸಿಬ್ಬಂದಿಗಳೊಂದಿಗೆ ಸಚಿವ ಸುರೇಶ್ ಗೋಪಿ ಸಂವಾದ ನಡೆಸಿದರು.

‘ಪ್ರವಾಹ ಪೀಡಿತ ಪ್ರದೇಶಗಳ ಸ್ಥಿತಿಯ ಕುರಿತ ವಿವರವನ್ನು ಕೇಂದ್ರ ಸರ್ಕಾರದ ಮುಂದಿಡುತ್ತೇನೆ. ಕೇಂದ್ರದಿಂದ ನೀಡಲಾಗುವ ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಭೂಕುಸಿತದ ಪರಿಣಾಮವನ್ನು ಅಂದಾಜು ಮಾಡಿ ಮನವಿ ಸಲ್ಲಿಸಬೇಕು. ಆ ಬಳಿಕವಷ್ಟೇ ನೆರವು ನೀಡುವ ಬಗ್ಗೆ ಏನಾದರೂ ಹೇಳಬಹುದು’ ಎಂದು ಅವರು ತಿಳಿಸಿದ್ದಾರೆ.
.Wayanad Landslides: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಉಚಿತ ಪಡಿತರ ವಿತರಣೆ.Wayanad: ಸಂತ್ರಸ್ತರ ನೆರವಿಗೆ ₹1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ ಚರಣ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.