ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಅಲ್ಲದೆ ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಜತೆಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

'ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಪ್ರಯತ್ನಕ್ಕೆ ಶುಭ ಹಾರೈಕೆಗಳು. ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಒಮರ್ ಮತ್ತು ಅವರ ತಂಡದೊಂದಿಗೆ ಜತೆಗೂಡಿ ಕೇಂದ್ರ ಸರ್ಕಾರವು ನಿಕಟವಾಗಿ ಕಾರ್ಯ ನಿರ್ವಹಿಸಲಿದೆ' ಎಂದು ಹೇಳಿದ್ದಾರೆ.

ಒಮರ್ ಅಬ್ದುಲ್ಲಾ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರತಿಜ್ಞಾವಿಧಿ ಬೋಧಿಸಿದರು.

ಒಮರ್ ಅಬ್ದುಲ್ಲಾ ಜೊತೆ ಐದು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಕೀನಾ ಮಸೂದ್, ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು.

2019ರಲ್ಲಿ ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾಯಿತ ಸರ್ಕಾರ ರಚನೆಗೊಂಡಿದೆ.
.ಜಮ್ಮು-ಕಾಶ್ಮೀರ | ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪನೆ: ಒಮರ್ ಅಬ್ದುಲ್ಲಾ.ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.