ನವದೆಹಲಿ: 1991ರ ಪೂಜಾ ಸ್ಥಳಗಳ (ವಿಶೇಷ ಅವಕಾಶ) ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಫೆಬ್ರುವರಿ ಕಡೆಯವರೆಗೆ ಸಮಯಾವಕಾಶ ನೀಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಕುರಿತು ಸಲ್ಲಿಸಿದ್ದ ಮನವಿ ಸ್ವೀಕರಿಸದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ಪೀಠವು ಈ ಅವಕಾಶ ನೀಡಿದೆ.

ಈ ಅರ್ಜಿಗಳಿಗೆ ಸಂಬಂಧಿಸಿದ ಮುಂದಿನ ವಿಚಾರಣೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಲಿದೆ. ಆಗ ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆ ನೀಡಬೇಕು ಎಂದು ತುಷಾರ್ ಹೇಳಿದ್ದಾರೆ.

1947ರ ಆಗಸ್ಟ್ 15ರಲ್ಲಿ ಪೂಜಾ ಸ್ಥಳಗಳಲ್ಲಿ ಇದ್ದ ನಿಯಮಗಳನ್ನೇ ಮುಂದುವೆರೆಸುವಂತೆ ಈ ಕಾಯ್ದೆಯಲ್ಲಿ ಹೇಳಲಾಗಿದೆ. ಅದನ್ನು ಪ್ರಶ್ನಿಸಿ ವಕೀಲರಾದ ಅಶ್ವಿನಿ ಕುಮಾರ್ ಉಪಾದ್ಯಾಯ ಮತ್ತಿತರರು ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.