ಅಮರಾವತಿ: ಆಂಧ್ರಪ್ರದೇಶದ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ವೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾಗಿರುವುದು ಸಂಚಲನ ಮೂಡಿಸಿದೆ.

ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತನಿಖೆಗೆ ಆದೇಶಿಸಿದ್ದಾರೆ.

ಹಾಸ್ಟೆಲ್ನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳು ಅಳವಡಿಸಿರುವ ಬಗ್ಗೆ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ. ಘಟನೆ ಸಂಬಂಧ ಈಗಾಗಲೇ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ಜತೆಗೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ ಎಂದು ಸಚಿವ ಕೊಳ್ಳು ರವೀಂದ್ರ ತಿಳಿಸಿದ್ದಾರೆ.

ಹಾಸ್ಟೆಲ್ನ ಶೌಚಾಲಯದಲ್ಲಿ ಯಾವುದೇ ರಹಸ್ಯ ಕ್ಯಾಮೆರಾಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರಿಸಲಾಗಿದೆ ಎಂದು ಗುಡ್ಲವಲ್ಲೇರು ಸಬ್ ಇನ್ಸ್ಪೆಕ್ಟರ್ ಸತ್ಯನಾರಾಯಣ ಸುದ್ದಿಸಂಸ್ಥೆ ‘ಎಎನ್ಐ’ಗೆ ತಿಳಿಸಿದ್ದಾರೆ.

ಕ್ಯಾಮೆರಾ ಪತ್ತೆಯಾದ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಪಕ್ಷ ವೈಎಸ್ಆರ್ಸಿಪಿ ಪ್ರತಿಭಟನೆ ನಡೆಸಿದೆ. ಇತ್ತ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
.ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆ ಕೇಳಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.