ರಾಯ್ಪುರ: ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯಲ್ಲಿ ಗುರುವಾರ ನಕ್ಸಲರ ಗುಂಪೊಂದು ಸುಧಾರಿತ ಸ್ಪೋಟಕಗಳನ್ಸು ಬಳಸಿ ಎಸ್ಯುವಿ ವಾಹನವನ್ನು ಸ್ಫೋಟಿಸಿದರ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು,11ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿಂದ 400 ಕಿ.ಮೀ.ದೂರದಲ್ಲಿರುವ ಮಲೆವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಘೋಟಿಯಾ ಗ್ರಾಮದ ಬಳಿ ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ನಾರಾಯಣಪು – ದಾಂತೇವಾಡ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಈ ಘಟನೆ ನಡೆದಿದೆ, ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಸುದ್ದಿ ಸಂಸ್ಥೆಗೆ ತಿಳಿಸಿದರು. .

‘ಬೊಲೆರೊ ವಾಹನ ಸ್ಫೋಟಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಒಬ್ಬ ಮಹಿಳೆ ಸೇರಿದಂತೆ 12 ಮಂದಿ ಇದ್ದರು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.