ರಾಯಪುರ: ಛತ್ತೀಸಗಢದಲ್ಲಿ ಕಾಂಗ್ರೆಸ್ ಪಕ್ಷವು ಅಚ್ಚರಿಯ ಸೋಲು ಕಂಡಿದೆ.

90 ಸ್ಥಾನಗಳನ್ನು ಹೊಂದಿರುವ ಛತ್ತೀಸಗಢದಲ್ಲಿ ಕಾಂಗ್ರೆಸ್ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ, ಈಗಿನ ಟ್ರೆಂಡ್ ಪ್ರಕಾರ ಮತಗಟ್ಟೆ ಸಮೀಕ್ಷೆಗಳು ಹುಸಿಯಾಗಿವೆ.

ಬಿಜೆಪಿ 54ರಲ್ಲಿ ಹಾಗೂ ಕಾಂಗ್ರೆಸ್ 36ರಲ್ಲಿ ಗೆದ್ದಿದೆ. ಜಿಜಿಪಿ1. ಒಟ್ಟು ಸ್ಥಾನ 90, ಬಹುಮತಕ್ಕೆ 46.

ಛತ್ತೀಸಗಢ ವಿಧಾನಸಭೆಗೆ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 20 ಕ್ಷೇತ್ರಗಳಿಗೆ ಮತ್ತು 2ನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

2003ರಿಂದ 2018ರ ವರೆಗೆ ಸತತ ಮೂರು ಬಾರಿ ಆಡಳಿತ ನಡೆಸಿದ್ದ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿತ್ತು. ಕೇವಲ 15 ಸ್ಥಾನಗಳನ್ನು ಜಯಿಸುವುದರೊಂದಿಗೆ ಅಧಿಕಾರದಿಂದ ಕೆಳಗಿಳಿದಿತ್ತು.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಕ್ಷೇತ್ರಗಳಲ್ಲಿ ಜಯ ಗಳಿಸಿ ಭಾರಿ ಬಹುಮತ ಸಾಧಿಸಿತ್ತು. ಜೆಸಿಸಿ ಮತ್ತು ಬಿಎಸ್ಪಿ ಪಕ್ಷಗಳು ಕ್ರಮವಾಗಿ 5 ಹಾಗೂ 2 ಸ್ಥಾನ ಜಯಿಸಿದ್ದವು. ಛತ್ತೀಸಗಢ ವಿಧಾನಸಭೆಯ ಮ್ಯಾಜಿಕ್ ನಂಬರ್ 46.

ಕಣದಲ್ಲಿದ್ದ ಪ್ರಮುಖ ನಾಯಕರು: ಛತ್ತೀಸಗಢ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಭೂಪೇಶ್ ಬಘೆಲ್, ಮಾಜಿ ಸಿಎಂ, ಬಿಜೆಪಿ ನಾಯಕ ರಮಣ್ ಸಿಂಗ್ ಅವರು ಕಣಕ್ಕಿಳಿದಿದ್ದರು.

ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಸದ್ಯ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 36ರಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಛತ್ತೀಸಗಢ ವಿಧಾನಸಭೆಯ ಮ್ಯಾಜಿಕ್ ನಂಬರ್ 46.

ಛತ್ತೀಸಗಢ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಭೂಪೇಶ್ ಬಘೆಲ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ವಿಜಯ್ ವಿರುದ್ಧ 20 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

.Election Results: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ- ಪ್ರಧಾನಿ ಮೋದಿ ಭಾಷಣ.Election Results 2023: ಮ.ಪ್ರದೇಶ, ರಾಜಸ್ಥಾನ, ಛತ್ತೀಸ್ಗಢದಲ್ಲಿ ಬಿಜೆಪಿ, ತೆಲಂಗಾಣದಲ್ಲಿ 'ಕೈ'.Election Result 2023 Quick Guide: ಫಲಿತಾಂಶ ಪೂರ್ಣ ಚಿತ್ರಣ ಇಲ್ಲಿದೆ.Rajasthan Results 2023: BJP-Congress ನಡುವೆ 25 ವರ್ಷಗಳಿಂದ ಅಧಿಕಾರ ಬದಲಾವಣೆ.ಚುನಾವಣಾ ಫಲಿತಾಂಶ ಬ್ಲಾಕ್ಬಸ್ಟರ್ ಸಿನಿಮಾ, ಕ್ರೀಡೆಗಿಂತಲೂ ರೋಚಕ: ಆನಂದ್ ಮಹೀಂದ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.