ರಾಯಗಡ (ಛತ್ತೀಸಗಡ): ನಗರದ ಸರ್ಕಾರಿ ಶಾಲೆಯೊಂದರಲ್ಲಿ ಮಂಗಳವಾರ 9ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಬಾಲಕನನ್ನು 17 ವರ್ಷದ ಸಹಪಾಠಿಗಳೇ ಇರಿದು ಕೊಂದಿದ್ದು, ಪ್ರೇಮ ಪ್ರಕರಣವೇ ಇದಕ್ಕೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನಗರದ ಕೊಟ್ಟಾಲಿ ಠಾಣೆ ವ್ಯಾಪ್ತಿಯ ರಾಂಭತಾದ ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಈ ಘಟನೆ ನಡೆದಿದೆ. ಜಗಳ ತೆಗೆದ ಇಬ್ಬರು ವಿದ್ಯಾರ್ಥಿಗಳ ಪೈಕಿ ಒಬ್ಬ ಚೂರಿಯಿಂದ ಇರಿದ, ಓಡಿ ಹೋಗುವಾಗ ಶಾಲೆಯ ಸಿಬ್ಬಂದಿಗೂ ಬೆದರಿಕೆ ಒಡ್ಡಿದ್ದರು ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು, ಆದರೆ ಬಾಲಕ ಮೃತಪಟ್ಟಿದ್ದನ್ನು ವೈದ್ಯರು ದೃಢಪಡಿಸಿದರು. ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಾಪರಾಧ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಎಸ್ಪಿ ಅಭಿಷೇಕ್ ಮೀನಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.