ದುರ್ಗ್ (ಛತ್ತೀಸ್ಗಡ): ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದಕುಮಾರ್ ಬಘೇಲ್, ಮತಪತ್ರಗಳಮೂಲಕ ಚುನಾವಣೆ ನಡೆಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ರಾಷ್ಟ್ರಪತಿಗಳಿಗೆ ಬರೆದ ಪತ್ರ ಬರೆದಿರುವ ಅವರು, ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವಾಗದಿದ್ದರೆ ‘ದಯಾಮರಣ’ ನೀಡುವಂತೆಯೂ ಮನವಿ ಮಾಡಿದ್ದಾರೆ.

‘ದೇಶದ ನಾಗರಿಕರ ಎಲ್ಲಾ ಸಾಂವಿಧಾನಿಕ ಹಕ್ಕುಗಳು ದೊಡ್ಡ ಮಟ್ಟದಲ್ಲಿ ಉಲ್ಲಂಘನೆಯಾಗುತ್ತಿವೆ. ಪ್ರಜಾಪ್ರಭುತ್ವದ ಮೂರು ಆಧಾರ ಸ್ತಂಭಗಳಾದ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗ ನಾಶವಾಗುತ್ತಿವೆ. ಪ್ರಜಾಪ್ರಭುತ್ವದ ಮೂರು ಸ್ತಂಭಗಳ ಆಶಯದಂತೆ ಮಾಧ್ಯಮಗಳೂ ಕೆಲಸ ಮಾಡುತ್ತಿವೆ. ದೇಶದ ನಾಗರಿಕರ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾಗರಿಕರಲ್ಲಿ ಭಯದ ಭಾವನೆ ಮೂಡಿದೆ,’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮತದಾನದ ಬಗ್ಗೆ ಜಾಗೃತಿ ಮೂಡಿಸುವ ‘ರಾಷ್ಟ್ರೀಯ ಮತದಾತ ಜಾಗೃತಿ ಮಂಚ್’ಗೆ ಸಿಎಂ ಭೂಪೇಸ್ ಬಘೇಲ್ ಅವರ ತಂದೆ ನಂದಕುಮಾರ್ ಬಘೇಲ್ ಮುಖ್ಯಸ್ಥರಾಗಿದ್ದಾರೆ.

‘ಮತ ಚಲಾಯಿಸುವ ಹಕ್ಕು ಪ್ರಜಾಪ್ರಭುತ್ವದ ಪರಮೋಚ್ಚ ಹಕ್ಕು. ಇದನ್ನು ಇವಿಎಂಗಳ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಯಾವುದೇ ಸಂಸ್ಥೆಗಳು ಅಥವಾ ಸರ್ಕಾರಗಳು ಇವಿಎಂಗಳನ್ನು ಶೇಕಡಾ 100ರಷ್ಟು ನಿಖರವೆಂದು ಪ್ರಮಾಣೀಕರಿಸಿಲ್ಲ. ವಾಸ್ತವ ಹೀಗಿದ್ದರೂ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಯಂತ್ರಗಳನ್ನು ಬಳಸಿ ಮತದಾನ ನಡೆಸುವ ಮೂಲಕ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸಲಾಗುತ್ತಿದೆ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನನ್ನ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಣೆಯಾಗುತ್ತಿಲ್ಲ ಎಂದಮೇಲೆ, ನಾನು ಸಾಯುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ,’ ಎಂದು ಅವರು ಹೇಳಿದ್ದಾರೆ.

ಆರೋಗ್ಯಕರ ಪ್ರಜಾಪ್ರಭುತ್ವದ ಹಿತಾಸಕ್ತಿಯಿಂದ ಇವಿಎಂಗಳ ಬದಲಿಗೆ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲು ಆದೇಶ ನೀಡಬೇಕು. ಮತಪತ್ರಗಳಿಗೆ ಅನುಮತಿ ನೀಡದೇ ಹೋದರೆ, ಜನವರಿ 25ರ ಮತದಾರರ ದಿನದಂದು ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಮುದಾಯವೊಂದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ನಂದ ಕುಮಾರ್ ಬಘೇಲ್ ವಿವಾದದಲ್ಲಿ ಸಿಲುಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.