ರಾಯ್‌ಪುರ: ಛತ್ತೀಸಗಢದ ಕಂಕೆರ್ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ನಡೆದ ಸ್ಫೋಟದಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧ ಹುತಾತ್ಮರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಶಂಕಿತ ನಕ್ಸಲರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು (ಶನಿವಾರ) ಬೆಳಿಗ್ಗೆ ಪರ್ತಾಪುರದ ಅರಣ್ಯ ಪ್ರದೇಶದಲ್ಲಿ ನಕ್ಸಲರನ್ನು ಬಂಧಿಸಲಾಯಿತು. ಬಂಧಿತರನ್ನು ಮುಕುಂದ್ ನರ್ವಾಸ್ (45), ಜಗ್ಗು ರಾಮ್ ಅಂಚಲಾ (45), ಅರ್ಜುನ್ ಪೊಟೈ (26) ಮತ್ತು ದಶರತ್ ದುಗ್ಗಾ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮಾವೋವಾದಿಗಳ ಜನ್ ಮಿಲಿಷಿಯಾ ಸದಸ್ಯರು ಹಾಗೂ ಪರ್ತಾಪುರ ಗ್ರಾಮದ ಸ್ಥಳೀಯರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ನಕ್ಸಲ್ ದಾಳಿ: ಬಿಎಸ್‌ಎಫ್ ಯೋಧ ಸಾವು .
ಬಿಎಸ್‌ಎಫ್ ಮತ್ತು ಜಿಲ್ಲಾ ಪೊಲೀಸ್ ಪಡೆಯು ಸದಕ್ತೋಲ ಗ್ರಾಮದ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಬಾಂಬ್ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಬಿಎಸ್‌ಎಫ್ ಯೋಧ ಅಖಿಲೇಶ್ ರೈ (45) ಹುತ್ಮಾತರಾಗಿದ್ದರು.

ಬಂಧಿತ ನಾಲ್ವರು ನಕ್ಸಲರು ಬಾಂಬ್ ಸ್ಫೋಟದ ಘಟನೆಯಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.