ರಾಯಪುರ: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಕುಖ್ಯಾತ ‘ಮಹಾದೇವ್ ಬೆಟ್ಟಿಂಗ್ ಆ್ಯಪ್’ ಪ್ರಕರಣದ ತನಿಖೆಯನ್ನು ಛತ್ತೀಸಗಢ ಸರ್ಕಾರ ಸಿಬಿಐಗೆ ವಹಿಸಿದೆ.

ಈ ಸಂಬಂಧ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ‘ಮಹಾದೇವ್ ಬೆಟ್ಟಿಂಗ್ ಆ್ಯಪ್‌ನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಛತ್ತೀಸಗಢದ ವಿವಿಧ ಠಾಣೆಗಳಲ್ಲಿ 70 ಪ್ರಕರಣ ಹಾಗೂ ಆರ್ಥಿಕ ಅಪರಾಧಗಳ ವಿಭಾಗದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ಎಲ್ಲ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲು ಸರ್ಕಾರ ನಿರ್ಧರಿಸಿದ್ದು, ಕಳೆದ ವಾರ ಅಧಿಸೂಚನೆಯನ್ನು ಹೊರಡಿಸಿದೆ’ ಎಂದು ತಿಳಿಸಿದ್ದಾರೆ.

ಈ ಹಗರಣವು ಛತ್ತೀಸಗಢಕ್ಕೆ ಸೀಮಿತವಾಗಿರದೆ, ಬಹುರಾಜ್ಯಗಳೊಂದಿಗೆ ಸಂಪರ್ಕ ಹೊಂದಿದೆ. ಅಲ್ಲದೆ ಹಗರಣದ ಕೆಲ ರೂವಾರಿಗಳು ವಿದೇಶದಲ್ಲಿ ನೆಲಸಿದ್ದಾರೆ. ಸಿಬಿಐ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.