ನವದೆಹಲಿ (ಪಿಟಿಐ): ಛತ್ತೀಸಗಢ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಒತ್ತಾಯಿಸಿದೆ.

‘ರಾಜಕೀಯ ನಾಯಕರ ಸಹಾಯವಿಲ್ಲದೆ ಇಷ್ಟೊಂದು ಕೋಟಿ ಹಗರಣವನ್ನು ಮಾಡಲು ಸಾಧ್ಯವಿಲ್ಲ. ಇಂತಹ ದೊಡ್ಡ ಹಗರಣದ ಹಿಂದೆ ರಾಜಕೀಯ ನಾಯಕರ ಆಶೀರ್ವಾದ ಇದ್ದಿರಲೇಬೇಕು. ಈ ಹಗರಣವು ನೇರವಾಗಿ ರಾಜ್ಯದ ಮುಖ್ಯಮಂತ್ರಿಯ ಕಡೆಗೆ ಬೆರಳು ಮಾಡುತ್ತದೆ‘ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹಗರಣದ ಹಿಂದೆ ಮುಖ್ಯಮಂತ್ರಿ ಅವರ ಪಾತ್ರವೇನಿದೆ ಎನ್ನುವುದನ್ನು ತನಿಖೆ ಮಾಡಬೇಕಿದೆ. ಅದಕ್ಕಾಗಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಬಂಧಿಸಿ ವಿಚಾರಣೆ ಮಾಡಬೇಕು. ಅಲ್ಲದೇ ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತುಂಬಾ ಹತ್ತಿರವಾಗಿರುವುದರಿಂದ ಅವರನ್ನೂ ವಿಚಾರಣೆಗೆ ಒಳಪಡಿಸಬೇಕು‘ ಎಂದು ಅವರು ಒತ್ತಾಯಿಸಿದರು.

ಅಬಕಾರಿ ಹಗರಣಕ್ಕೆ ಸಂಬಂಧಪಟ್ಟಂತೆ ಶನಿವಾರ ಕಾಂಗ್ರೆಸ್ ನಾಯಕ, ರಾಯ್‌ಪುರ ಮೇಯರ್ ಐಜಾಜ್ ಧೇಬರ್ ಅವರ ಸಹೋದರ, ಮದ್ಯ ಉದ್ಯಮಿ ಅನ್ವರ್ ಧೇಬರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

2019-22ರ ನಡುವೆ ನಡೆದ ಅಬಕಾರಿ ಹಗರಣದಲ್ಲಿ ಸುಮಾರು ₹ 2 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಹಗರಣದಲ್ಲಿ ಸರ್ಕಾರಿ ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಮತ್ತು ಖಾಸಗಿ ವ್ಯಕ್ತಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.