ರಾಯಪುರ: ನವೆಂಬರ್ 17 ರಂದು ನಡೆಯಲಿರುವ ಛತ್ತೀಸಗಢ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನಕ್ಕಾಗಿ ಚುನಾವಣಾ ಪ್ರಚಾರವು ಬುಧವಾರ ಸಂಜೆ ಕೊನೆಗೊಂಡಿತು.

ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 22 ಜಿಲ್ಲೆಗಳ 70 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಶುಕ್ರವಾರ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು. ಭ್ರಷ್ಟಾಚಾರ, ವಿಶೇಷವಾಗಿ ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಹಗರಣ, ನೇಮಕಾತಿ ಹಗರಣ ಮತ್ತು ನಕ್ಸಲ್ವಾದದ ಬಗ್ಗೆ ಮುಖ್ಯಮಂತ್ರಿ ಭೂಪೇಶ್ ಬಘೆಲ್ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪಕ್ಷದ ಪರವಾಗಿ ಪ್ರಚಾರ ನಡೆಸಿದರು. ಆಡಳಿತಾರೂಢ ಕಾಂಗ್ರೆಸ್ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಭೂಪೇಶ್ ಬಘೆಲ್ ಪ್ರಚಾರ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.