ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, 106 ದಿನಗಳ ಜೈಲು ವಾಸಕ್ಕೆ ಮುಕ್ತಿ ಸಿಕ್ಕದೆ.

ಆರ್.ಭಾನುಮತಿ, ಎ.ಎಸ್.ಬೋಪಣ್ಣ ಮತ್ತು ಋಷಿಕೇಶ್ ರಾಯ್ ಅವರನ್ನೋಳಗೊಂಡ ಪೀಠ ಜಾಮೀನು ನೀಡಿದೆ.

ಜಾಮೀನು ತಿರಸ್ಕರಿಸಿ ದೆಹಲಿ ಹೈಕೋರ್ಟ್ ಈಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 22ರಂದು ಸಿಬಿಐ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಚಿದಂಬರಂ ಅವರಿಗೆ ಜಾಮೀನು ನೀಡಿತ್ತು. ಅದೇ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತೊಂದು ಅಪರಾಧದಲ್ಲಿ ಅವರನ್ನು ಬಂಧಿಸಿದೆ.

ಇ.ಡಿ ಪ್ರಕರಣದಲ್ಲಿ ಬಂಧನದಲ್ಲಿರುವ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ನವೆಂಬರ್ 15ರಂದು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಆರೋಪಿಯ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾದವು. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿತ್ತು.

ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್ಎಕ್ಸ್ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.