ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಆರು ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಜಂಟಿ ನಿರ್ಣಯವನ್ನು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾನುವಾರ ಸ್ವಾಗತಿಸಿದ್ದು, ವಿಶೇಷ ಸ್ಥಾನಮಾನ ಹಿಂಪಡೆಯುವ ಬೇಡಿಕೆಗೆ ದೃಢ ನಿಶ್ಚಯದಿಂದ ಬದ್ಧರಾಗಿರುವಂತೆ ಮನವಿ ಮಾಡಿದ್ದಾರೆ.

‘370ನೇ ವಿಧಿಯನ್ನು ರದ್ದುಗೊಳಿಸಿರುವ ಕ್ರಮದ ವಿರುದ್ಧ ಹೋರಾಡಲು ಶನಿವಾರ ಒಗ್ಗೂಡಿದ ಆರು ಪ್ರತಿ ಪಕ್ಷಗಳ ಒಗ್ಗಟ್ಟು ಮತ್ತು ಧೈರ್ಯಕ್ಕೆ ಅಭಿಂದನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಸಂಬಂಧ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇತಿಹಾಸವನ್ನು ಓದದ ಆದರೆ ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುವ ಸ್ವ-ಶೈಲಿಯ ರಾಷ್ಟ್ರೀಯವಾದಿಗಳ ಟೀಕೆಗಳನ್ನು ನಿರ್ಲಕ್ಷಿಸಿ’ ಎಂದು ಹೇಳಿದ್ದಾರೆ.

ಜಮ್ಮು– ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಒಂದು ವರ್ಷದ ನಂತರ ಈ ಎರಡೂ ಕೇಂದ್ರಾಡಳಿತ ಪ್ರದೇಶಗಳರಾಜಕೀಯ ಪಕ್ಷಗಳು ವೈಷ್ಣಮ್ಯವನ್ನು ಬದಿಗಿಟ್ಟು ಮಾತುಕತೆ ನಡೆಸಿದ್ದವು.

ಶನಿವಾರ ತೆಗೆದುಕೊಂಡ ನಿರ್ಣಯಕ್ಕೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಜಮ್ಮು–ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ಜಿ.ಎ ಮಿರ್, ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಸಜ್ಜಾದ್ ಲೋನ್, ರಾಜ್ಯ ಸಿಪಿಐ (ಎಂ) ಮುಖಂಡ ಎಂ.ವೈ ತಾರಿಗಾಮಿ ಮತ್ತು ಜಮ್ಮು ಮತ್ತು ಕಾಶ್ಮೀರ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ಉಪಾಧ್ಯಕ್ಷ ಮುಜಾಫರ್ ಷಾ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.