ನವದೆಹಲಿ: ನಾಲ್ಕು ರಾಜ್ಯಗಳ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಭಾನುವಾರ ತಿಳಿಸಿದ್ದಾರೆ.

ರಿಜುಜು ಅವರು ನ್ಯಾಯಮೂರ್ತಿಗಳ ನೇಮಕ ಸಂಬಂಧ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯಾ. ಸೋನಿಯಾ ಗಿರಿಧರ್ ಗೋಕನಿ ಅವರು ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಈ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅರವಿಂದ್ ಕುಮಾರ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಹೀಗಾಗಿ ಅವರ ಅವರ ಹುದ್ದೆಗೆ ಗಿರಿಧರ್ ಗೋಕನಿಯವರನ್ನು ಹಂಗಾಮಿಯಾಗಿ ಶುಕ್ರವಾರ ನೇಮಿಸಲಾಗಿತ್ತು.

ಉಳಿದಂತೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂದೀಪ್ ಮೆಹ್ತಾ ಅವರು ಗುವಾಹಟಿ ಹೈಕೋರ್ಟ್‌ಗೆ, ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಜಸ್ವಂತ್ ಸಿಂಗ್ ಅವರು ತ್ರಿಪುರಾ ಹೈಕೋರ್ಟ್‌ಗೆ ಮತ್ತು ಗುವಾಹಟಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಎನ್.ಕೋಟಿಶ್ವರ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ಗೆ ಮುಖ್ಯನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.