ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ದುಬೈ ಮೂಲದ ಉದ್ಯಮಿ ರಾಜೀವ್ ಸಕ್ಸೇನಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

₹ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತದ ಭದ್ರತೆ ಆಧಾರದ ಮೇಲೆ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಡಿಸೆಂಬರ್ 11 ವರೆಗೆ ಮಧ್ಯಂತರ ಜಾಮೀನು ನೀಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ, ತನ್ನ ಆಕ್ಷೇಪಣೆಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸಲು ಸಮಯಾವಕಾಶ ಕೇಳಿತು. ಇದೇ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ಸಂದೀಪ್ ತ್ಯಾಗಿ ಅವರಿಗೂ ಕೋರ್ಟ್ ಜಾಮೀನು ನೀಡಿತು.

ಗಣ್ಯರ ಪ್ರವಾಸಕ್ಕಾಗಿ ಹೆಲಿಕಾಪ್ಟರ್ ಖರೀದಿಸಿದ ವೇಳೆ ₹ 3,600 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.