ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಕ್ರೈಸ್ತ ಧರ್ಮದ ಪ್ರಾರ್ಥನಾ ಮಂದಿರಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ತುಳಸಿಧಾಮ್ ಪ್ರದೇಶದಲ್ಲಿ ಕ್ರೈಸ್ತರು ಕಟ್ಟಡವೊಂದನ್ನು ಪ್ರಾರ್ಥನಾ ಮಂದಿರವನ್ನಾಗಿ ಬಳಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೂರಿನ ಅನ್ವಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295A ಹಾಗೂ ಇನ್ನಿತರ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಘಟನೆಯಲ್ಲಿ ಪ್ರಾರ್ಥನಾ ಮಂದಿರದ ಕಿಟಕಿ ಗಾಜುಗಳು ಒಡೆದು ಹೋಗಿವೆ. ಹವಾನಿಯಂತ್ರಣ ಸಾಧನ ಹಾಗೂ ವಿದ್ಯುತ್ ಮೀಟರ್‌ನ ತಂತಿಗಳು ಹಾನಿಗೀಡಾಗಿವೆ. ಬಾಗಿಲಲ್ಲಿ ಆಕ್ಷೇಪಾರ್ಹ ಬರಹಗಳು ಇರುವ ಬ್ಯಾನರ್ ಅಳವಡಿಸಲಾಗಿದೆ.

ಗುರುವಾರ ಬೆಳಿಗ್ಗೆ ಪ್ರಾರ್ಥನೆಗೆಂದು ಸ್ಥಳಕ್ಕೆ ಬಂದಿದ್ದ ಕ್ರೈಸ್ತ ಸನ್ಯಾಸಿನಿಗೆ ಮಣ್ಣು ಮೆತ್ತಿದ ಬೋರ್ಡ್ ಹಾಗೂ ಹಾನಿಗೊಂಡ ಶಿಲುಬೆ ಕಾಣಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ತನಿಖೆ ಪ್ರಗತಿಯಲ್ಲಿದ್ದು, ಯಾವುದೇ ಆರೋಪಿಗಳ ಬಂಧನವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.