ತಿರುವನಂತಪುರಂ: ಕ್ರಿಸ್‌ಮಸ್ ಆಚರಣೆಯ ಭಾಗವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ಪೂವರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ ಸುಮಾರು 8 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಸ್‌ಮಸ್ ಆಚರಣೆಯ ಭಾಗವಾಗಿ ಯೇಸುವಿನ ವಿವಿಧ ಕಲಾಕೃತಿಗಳು, ವಿಭಿನ್ನ ಬಗೆಯ ಮೂರ್ತಿಗಳು, ಅಲಂಕಾರಿಕ ಪ್ರದರ್ಶನ ಏರ್ಪಡಿಸಿದ್ದರು. ಒಂದು ಭಾಗದಿಂದ ಇನ್ನೊಂದು ಕಡೆಗೆ ತೆರಳಲು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇತುವೆ ಮೇಲೆ ನಿಂತಿದ್ದಾರೆ. ಅಧಿಕ ಭಾರದಿಂದಾಗಿ ತಾತ್ಕಾಲಿಕ ಸೇತುವೆ ಕುಸಿದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ತಾತ್ಕಾಲಿಕ ಸೇತುವೆಯು ನೆಲದ ಮಟ್ಟದಿಂದ 5 ಅಡಿಗಳಷ್ಟು ಎತ್ತರದಲ್ಲಿ ನಿರ್ಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.