ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.

ಆದೇಶದ ಪ್ರಕಾರ ಜೈಸ್ವಾಲ್ ಅವರ ಅಧಿಕಾರವಧಿ ಎರಡು ವರ್ಷಗಳವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ ಅವರ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಸೋಮವಾರ ಅಂತಿಮಗೊಳಿಸಿತ್ತು.

ಮಹಾರಾಷ್ಟ್ರ ಕೇಡರ್ನ 1985 ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿದ್ದಾರೆ. ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.