ಚೆನ್ನೈ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ(ಸಿಐಎಸ್ಎಫ್) ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಯೋಧರೊಬ್ಬರು ಶನಿವಾರ ತಮಿಳುನಾಡಿನಲ್ಲಿ ಗುಂಡು ತಗುಲಿ ಮೃತಪಟ್ಟಿದ್ದಾರೆ.

‘ಮೃತ ಯೋಧ ರವಿಕಿರಣ್(37) ಅವರು ಶನಿವಾರ ಕಲ್ಪಕ್ಕಂನಿಂದ ತಮ್ಮ ತವರೂರು ಬೆಂಗಳೂರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ರವಿಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಲ್ಲಿದ್ದ ಶಸ್ತ್ರಾಸ್ತ್ರದ ಸ್ಥಿತಿಯ ಬಗ್ಗೆ ವರದಿ ಬಂದ ಬಳಿಕ ರವಿಕಿರಣ್ ಸಾವಿಗೆ ನಿಖರ ಕಾರಣವನ್ನು ಪತ್ತೆ ಮಾಡಬಹುದು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.