ನವದೆಹಲಿ: ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯನ್ಯಾಯಮೂರ್ತಿ (ಸಿಜೆಐ) ಹುದ್ದೆಗೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.

ನ್ಯಾಯಮೂರ್ತಿ ಖನ್ನಾ ಅವರು 51ನೇ ಸಿಜೆಐ ಆಗಿ ನವೆಂಬರ್ 11ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಮುಂದಿನ ವರ್ಷ ಮೇ 13ರಂದು ನಿವೃತ್ತಿ ಹೊಂದುವರು. ಸಿಜೆಐ ಆಗಿ ಅವರ ಅಧಿಕಾರಾವಧಿ 6 ತಿಂಗಳು ಮಾತ್ರ ಇರಲಿದೆ.

2005ರಲ್ಲಿ ಅವರು ದೆಹಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು. ನಂತರ, 2006ರಲ್ಲಿ ಹೈಕೋರ್ಟ್ನ ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2019ರ ಜನವರಿ 18ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು.

1960ರ ಮೇ 14ರಂದು ಜನಿಸಿರುವ ನ್ಯಾಯಮೂರ್ತಿ ಖನ್ನಾ, ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.