ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಬಾಕಿ ವಿಷಯಗಳ ಪರೀಕ್ಷೆಗೆ ಹಾಜರಾಗದೇ ಇರಲು ನಿರ್ಧರಿಸಿದರೆ, ಅದಕ್ಕೆ ಅವಕಾಶ ನೀಡಲಾಗುವುದು ಎಂದು ಸಿಐಎಸ್‌ಸಿಇ ತಿಳಿಸಿದೆ.

‘ಪರೀಕ್ಷೆಗೆ ಹಾಜರಾಗುವ ಇಲ್ಲವೇ ಹಾಜರಾಗದೇ ಇರುವ ತಮ್ಮ ಆಯ್ಕೆ ಕುರಿತಂತೆ ವಿದ್ಯಾರ್ಥಿಗಳು ಜೂನ್ 22ರ ಒಳಗಾಗಿ ಆಯಾ ಶಾಲೆಗಳಿಗೆ ಮಾಹಿತಿ ನೀಡಬೇಕು’ ಎಂದು ಸಿಐಎಸ್‌ಸಿಇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯದರ್ಶಿ ಗೆರ್ರಿ ಅರಾಥೂನ್ ಮಂಗಳವಾರ ತಿಳಿಸಿದ್ದಾರೆ.

‘ಈ ಮೊದಲು ನಡೆದ ಪರೀಕ್ಷೆಯಲ್ಲಿ ಪಡೆದ ಅಥವಾ ಆಂತರಿಕ ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ನಿರ್ಧರಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ಕೋವಿಡ್–19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಸಿಐಎಸ್‌ಸಿಇಗೆ ನಿರ್ದೇಶನ ನೀಡುವಂತೆ ಕೋರಿ ಪಾಲಕರೊಬ್ಬರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಸಿಐಎಸ್‌ಸಿಇ, ಬಾಂಬೆ ಹೈಕೋರ್ಟ್‌ಗೂ ಈ ಪ್ರಸ್ತಾವವನ್ನು ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.