ಇಂದೋರ್(ಮಧ್ಯ ಪ್ರದೇಶ): ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಹಲ್ಲೆ ನಡೆಸಿದ್ದು, ಕಂಪಾಸ್‌ನಿಂದ(ಕೈವಾರ) 108 ಬಾರಿ ಚುಚ್ಚಿದ್ದಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 24ರಂದು ಈ ಘಟನೆ ನಡೆದಿದ್ದು, ಘಟನೆ ಕುರಿತಂತೆ ವರದಿ ನೀಡುವಂತೆ ಪೊಲೀಸರಿಗೆ ಸಿಡಬ್ಲ್ಯುಸಿ ತಿಳಿಸಿದೆ.

‘ಘಟನೆ ಬಗ್ಗೆ ತಿಳಿದು ಆಘಾತವಾಯಿತು. ಇಷ್ಟು ಎಳೆಯ ವಯಸ್ಸಿನಲ್ಲಿ ಕ್ರೂರತನದಿಂದ ವರ್ತಿಸಲು ಹಿಂದಿರುವ ಕಾರಣವನ್ನು ತಿಳಿದುಕೊಳ್ಳುವ ಸಲುವಾಗಿ ಪೊಲೀಸರಿಂದ ಘಟನೆ ಕುರಿತಂತೆ ವರದಿ ಕೇಳಿದ್ದೇವೆ’ ಎಂದು ಸಿಡಬ್ಲ್ಯುಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ಹೇಳಿದರು.

‘ಘಟನೆಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಮಕ್ಕಳು ಮತ್ತು ಅವರ ಕುಟುಂಬವನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಿದ್ದೇವೆ. ಇಂತಹ ನಡವಳಿಕೆ ಹಿಂದೆ ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳ ಪ್ರಭಾವವಿದೆಯೇ ಎಂದು ತಿಳಿದುಕೊಳ್ಳಬೇಕಿದೆ’ ಎಂದರು.

‘ಮನೆಗೆ ಬಂದ ಮಗ ತಾನು ಅನುಭವಿಸಿದ ಹಿಂಸೆಯ ಬಗ್ಗೆ ಹೇಳಿಕೊಂಡಿದ್ದಾನೆ. ಯಾಕೆ ಅವನ ಸಹಪಾಠಿಗಳು ಹೀಗೆ ನಡೆದುಕೊಂಡರು ಎಂದು ನನಗೆ ತಿಳಿದಿಲ್ಲ. ಸಿಸಿಟಿವಿ ದೃಶ್ಯಗಳನ್ನು ಕೊಡಲು ಶಾಲಾ ಆಡಳಿತ ಮಂಡಳಿ ನಿರಾಕರಿಸಿದೆ’ ಎಂದು ಬಾಲಕನ ತಂದೆ ಹೇಳಿದ್ದಾರೆ.

’ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಹಲ್ಲೆ ನಡೆಸಿದ ಮೂವರು 10 ವರ್ಷಕ್ಕಿಂತ ಚಿಕ್ಕವರಾಗಿದ್ದರಿಂದ ಕಾನೂನು ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.