ಚೆನ್ನೈ: ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಮಣಿಪುರ ಕ್ರೀಡಾಪಟುಗಳಿಗೆ ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸ್ಟಾಲಿನ್, 'ವಿಶ್ವದರ್ಜೆಯ ಕ್ರೀಡಾಪಟುಗಳನ್ನು ಈಶಾನ್ಯ ರಾಜ್ಯಗಳು ನೀಡಿವೆ. ಅದರಲ್ಲಿಯೂ ಮಹಿಳಾ ಕ್ರೀಡಾ ಸಾಧಕರಿಗೆ ಮಣಿಪುರ ಹೆಸರುವಾಸಿಯಾಗಿದೆ. ಅನೇಕ ಕ್ರೀಡಾಪಟುಗಳನ್ನು ನೀಡಿದ ರಾಜ್ಯದ ಸ್ಥಿತಿ ಇಂದು ಚಿಂತಾಜನಕವಾಗಿದೆ. ಅಲ್ಲಿನ ಕ್ರೀಡಾಪಟುಗಳು ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಳ್ಳಬಹುದು' ಎಂದು ತಿಳಿಸಿದರು.

'ಮಣಿಪುರದ ಕ್ರೀಡಾಪಟುಗಳಿಗೆ ಅಲ್ಲಿನ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಹಾಗಾಗಿ ತಮಿಳುನಾಡಿನಲ್ಲಿ ತರಬೇತಿ ಪಡೆಯಲಿಚ್ಛಿಸುವ ಮಣಿಪುರದ ಕ್ರೀಡಾಪಟುಗಳಿಗೆ ಎಲ್ಲ ಅವಕಾಶ ಕಲ್ಪಿಸಿಕೊಡುವಂತೆ ಕ್ರೀಡಾ ಸಚಿವ ಉದಯನಿಧಿ ಅವರಿಗೆ ಸೂಚನೆ ನೀಡಲಾಗಿದೆ' ಎಂದು ತಿಳಿಸಿದ್ದಾರೆ.

'ಮಣಿಪುರದ ಕ್ರೀಡಾಪಟುಗಳು ತಮ್ಮ ಹೆಸರು, ವಿಳಾಸ, ಗುರುತಿನ ಚೀಟಿ ಜೊತೆ ತರಬೇತಿಗೆ ಅಗತ್ಯವಿರುವ ಕ್ರೀಡಾ ಸಲಕರಣೆಗಳೊಂದಿಗೆ sportstn2023@gmail.com ಅಥವಾ +91 8925903047 ಅನ್ನು ಸಂಪರ್ಕಿಸಬಹುದಾಗಿದೆ. ಆ ಮೂಲಕ ತಮಿಳುನಾಡು ಕ್ರೀಡಾ ಅಭಿವೃದ್ದಿ ಪ್ರಾಧಿಕಾರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು' ಎಂದು ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ 'ಖೇಲೊ ಇಂಡಿಯಾ' ಕ್ರೀಡಾಕೂಟದ ಆತಿಥ್ಯವನ್ನು ತಮಿಳುನಾಡು ವಹಿಸಿಕೊಳ್ಳಲಿದೆ. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಕಳೆದೆರಡು ದಿನಗಳಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಶಿಕ್ಷಣ, ಕ್ರೀಡಾ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೂ ಹಿಂಸಾಚಾರ ಪರಿಣಾಮ ಬೀರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.