ನವದೆಹಲಿ: ದೆಹಲಿಯಲ್ಲಿ ಸುರಿದ ಮಳೆಯಿಂದಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರದೊಳಗೆ ನೀರು ನುಗ್ಗಿದ ಪರಿಣಾಮ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಸಾಧ್ಯತಾ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಘಟನೆ ನಡೆದ ಸಂದರ್ಭ ರಾಜೇಂದ್ರ ನಗರದ ಸುತ್ತಲಿನ ಉಪಗ್ರಹ ಚಿತ್ರಗಳು ಹಾಗೂ ಸಿಸಿಟಿವಿ ದೃಶ್ಯಾವಳಿಯನ್ನು ಸುರಕ್ಷಿತವಾಗಿ ಕಾಪಾಡುವಂತೆ ಕೋರಿ ಮೃತ ವ್ಯಕ್ತಿಯ ತಂದೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ನ್ಯಾ. ದಿನೇಶ್ ಕುಮಾರ್ ಶರ್ಮಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಜ. 15ಕ್ಕೆ ಮುಂದೂಡಿತು.

ದೆಹಲಿಯ ಹಳೇ ರಾಜೇಂದ್ರ ನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ ತರಬೇತಿ ಕೇಂದ್ರದಲ್ಲಿ ಜುಲೈ 27ರಂದು ನೀರು ನುಗ್ಗಿದ ಪರಿಣಾಮ ನೆಲಮಾಳಿಗೆಯಲ್ಲಿದ್ದ ಗ್ರಂಥಾಲಯದಲ್ಲಿ ಸಿಲುಕಿಕೊಂಡಿದ್ದ ಮೂವರು ಕೇಂದ್ರ ಲೋಕಸೇವಾ ಆಯೋಗದ ಹುದ್ದೆಗಳ ಆಕಾಂಕ್ಷಿಗಳು ಮೃತಪಟ್ಟಿದ್ದರು. ಆ ದಿನ ಕೇಂದ್ರದ ಸುತ್ತಮುತ್ತ ಇರುವ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳ ದೃಶ್ಯವಾಳಿಗಳನ್ನು ಸಂಗ್ರಹಿಸಿ, ಸುರಕ್ಷಿತವಾಗಿಟ್ಟು ಮತ್ತು ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದು ಮೃತ ಜೆ. ಡೆಲ್ವಿನ್ ಸುರೇಶ್ ಅವರ ತಂದೆ ನೆವಿನ್ ಡೆಲ್ವಿನ್ ನ್ಯಾಯಾಲಯವನ್ನು ಕೋರಿದ್ದರು.

ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರ ಹಾಜರಿದ್ದ ವಕೀಲರು, ‘ಈಗಾಗಲೇ ಸಿಸಿಟಿವಿ ದೃಶ್ಯಾವಳಿಯನ್ನು ಸಂಗ್ರಹಿಸಲಾಗಿದೆ’ ಎಂದು ಪೀಠದ ಗಮನಕ್ಕೆ ತಂದರು.

ಘಟನೆಯ ಹಿನ್ನೆಲೆ: ಜುಲೈ 27ರಂದು ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಹಳೇ ರಾಜೇಂದ್ರ ನಗರದಲ್ಲಿರುವ ಕೇಂದ್ರಕ್ಕೆ ನೀರು ನುಗ್ಗಿದ್ದರಿಂದ ಅಲ್ಲಿನ ಗ್ರಂಥಾಲಯದೊಳಗೆ ಸಿಲುಕಿದ್ದ ಉತ್ತರ ಪ್ರದೇಶದ ಶ್ರೇಯಾ ಯಾದವ್ (25), ತೆಲಂಗಾಣದ ತಾನ್ಯಾ ಸೋನಿ (24) ಹಾಗೂ ಕೇರಳದ ಡೆಲ್ವಿನ್ (24) ಮೃತಪಟ್ಟಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ತನಿಖೆ ನಡೆಸುತ್ತಿದ್ದ ದೆಹಲಿ ಪೊಲೀಸರಿಗೆ ಆ. 2ರಂದು ಹೈಕೋರ್ಟ್ ನಿರ್ದೇಶಿಸಿತು.

ಪ್ರಕರಣದಲ್ಲಿ ಬಂಧನಕ್ಕೊಳಗಾದ ಕಟ್ಟಡದ ಸಹ ಮಾಲೀಕರಿಗೆ ಸೆ. 13ರಂದು ಮಧ್ಯಂತರ ಜಾಮೀನು ಮಂಜೂರಾಯಿತು. ತರಬೇತಿ ಕೇಂದ್ರದ ಸಿಇಒ ಅಭಿಷೇಕ್ ಗುಪ್ತಾ, ಸಂಯೋಜಕ ದೇಶಪಾಲ್ ಸಿಂಗ್ ಅವರಿಗೆ ಸೆ. 23ರಂದು ಮಧ್ಯಂತರ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.