ನವದೆಹಲಿ: ಛತ್ತೀಸ್ಗಢದ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭೆಯ ಮಾಜಿ ಸದಸ್ಯ ವಿಜಯ್ ದರ್ದಾ ಮತ್ತು ಅವರ ಮಗ ದೇವೇಂದ್ರ ದರ್ದಾ ಹಾಗೂ ಉದ್ಯಮಿ ಮನೋಜ್ ಕುಮಾರ್ ಜೈಸ್ವಾಲ್ ಅವರಿಗೆ ದೆಹಲಿ ನ್ಯಾಯಾಲಯವು ತಲಾ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ನಂತರ ಎಲ್ಲಾ ಮೂವರು ಅಪರಾಧಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು, ಕಲ್ಲಿದ್ದಲು ಇಲಾಖೆಯ ಕಾರ್ಯದರ್ಶಿ ಎಚ್ ಸಿ ಗುಪ್ತಾ ಮತ್ತು ಇಬ್ಬರು ಮಾಜಿ ಅಧಿಕಾರಿಗಳಾದ ಕೆ ಎಸ್ ಕ್ರೋಫಾ ಮತ್ತು ಕೆ ಸಿ ಸಮ್ರಿಯಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಈ ಮೂವರು ಅಪರಾಧಿಗಳಿಗೆ ನ್ಯಾಯಾಲಯವು ವೈಯಕ್ತಿಕ ಬಾಂಡ್ ಆಧರಿಸಿ ಜಾಮೀನು ನೀಡಿದೆ.

ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದಿರುವ ಜೆಎಲ್ಡಿ ಯವತ್ಮಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನ್ಯಾಯಾಲಯ ₹50 ಲಕ್ಷ ದಂಡ ವಿಧಿಸಲಾಗಿದೆ.

ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜುಲೈ 13ರಂದು ಐಪಿಸಿಯ ಸೆಕ್ಷನ್ 120-ಬಿ (ಅಪರಾಧ ಪಿತೂರಿ) ಮತ್ತು 420 (ವಂಚನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಏಳು ಆರೋಪಿಗಳನ್ನು ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.