ಮೊರ್ಬಿ, ಗುಜರಾತ್:ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗುಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಪುನಃ ಮುಕ್ತಗೊಳಿಸುವ ಮುನ್ನ ಪುರಸಭೆಯಿಂದ ಅರ್ಹತಾ (ಫಿಟ್‌ನೆಸ್) ಪ್ರಮಾಣಪತ್ರ ಪಡೆದುಕೊಂಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶತಮಾನದಷ್ಟು ಹಳೆಯದಾದ ಈ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದು 78ಮಂದಿ ಮೃತಪಟ್ಟಿದ್ದರು.ನೂರಕ್ಕೂ ಹೆಚ್ಚು ಜನರು ನದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಸದ್ಯ ಸಾವಿನ ಸಂಖ್ಯೆ 120ಕ್ಕೆ ಏರಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

19ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದ್ದ 230 ಮೀಟರ್ ಉದ್ದದ ಈ ಸೇತುವೆಯನ್ನು ನವೀಕರಣದ ಸಲುವಾಗಿ ಕಳೆದ ಆರು ತಿಂಗಳಿನಿಂದ ನಾಗರಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ (ಅಕ್ಟೋಬರ್ 26) ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು.

'ಸೇತುವೆಯ ನಿರ್ವಹಣೆಯನ್ನು 15 ವರ್ಷಗಳ ಅವಧಿಗೆ ಒರೆವಾ ಕಂಪನಿಗೆ ನೀಡಲಾಗಿತ್ತು. ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ನವೀಕರಣ ಕಾರ್ಯ ಆರಂಭಿಸಿದ್ದರಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.ನವೀಕರಣದ ಕಾರ್ಯ ಮುಗಿದ ನಂತರ ಅಕ್ಟೋಬರ್ 26ರಂದು ಪುನಃ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಆದರೆ,ಸ್ಥಳೀಯ ಸಂಸ್ಥೆಯು ಇನ್ನೂ ಅರ್ಹತಾ ಪ್ರಮಾಣಪತ್ರ ನೀಡಿರಲಿಲ್ಲ' ಎಂದು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ ಝಾಲ ಹೇಳಿದ್ದಾರೆ.

‘ಭಾನುವಾರ ರಜೆ ಇದ್ದ ಕಾರಣ ಭಾರಿ ಸಂಖ್ಯೆಯ ಪ್ರವಾಸಿಗರು ಸೇತುವೆ ಮೇಲೆ ಸೇರಿದ್ದರು. ಭಾರ ತಾಳಲಾರದೆ ಸಂಜೆ 6.30ರ ಸುಮಾರಿಗೆ ಅದು ಮುರಿದು ಬಿದ್ದಿದೆ. ಸೇತುವೆ ಮೇಲಿದ್ದವರ ಪೈಕಿ ಬಹುಪಾಲು ಮಂದಿ ನದಿಗೆಬಿದ್ದರೆ, ಕೆಲವರು ಹಗ್ಗ ಹಿಡಿದು ನೇತಾಡುತ್ತಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್‌ಕೋಟ್ ಹಾಗೂ ಕಚ್‌ನಿಂದ ಎಸ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಚರಣೆಗೆ ಧಾವಿಸಿದ್ದಾರೆ.

ಇವನ್ನೂ ಓದಿ
*ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ತೂಗುಸೇತುವೆ ಕುಸಿತ: 78 ಮಂದಿ ಸಾವು
*ತೂಗುಸೇತುವೆ ದುರಂತಕ್ಕೆ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಸಿಪಿಐ ಟೀಕೆ
*ಮೊರ್ಬಿ ತೂಗು ಸೇತುವೆ ದುರಂತ: ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.