ನವದೆಹಲಿ: ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನರೇಂದರ್ ಜಿ ಅವರನ್ನು ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ನರೇಂದರ್ ಅವರು ಸದ್ಯ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದಾರೆ.

ಉತ್ತರಾಖಂಡ ಹೈಕೋರ್ಟ್‌ನ ಸಿಜೆ ರೀತೂ ಬಹ್ರಿ ಅವರು ಅ. 10ರಂದು ನಿವೃತ್ತರಾಗುವರು. ಇದರಿಂದ ತೆರವಾಗುವ ಸ್ಥಾನಕ್ಕೆ ನರೇಂದರ್ ನೇಮಕವಾಗುವರು. 10 ಮಂದಿ ವಕೀಲರನ್ನು ನ್ಯಾಯಮೂರ್ತಿಗಳಾಗಿ ನೇಮಿಸಲೂ ಕೊಲಿಜಿಯಂ ಶಿಫಾರಸು ಮಾಡಿದೆ.

‘ನರೇಂದರ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲೂ ಕೆಲಸ ಮಾಡಿದ್ದು, ಅತಿ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಇವರು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವರು. ಪ್ರಸ್ತುತ, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಲ್ಲಿ ಕರ್ನಾಟಕ ಮೂಲದವರು ಇಲ್ಲ’ ಎಂದು ಸುಪ್ರೀಂ ಕೋರ್ಟ್‌ನ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ವೇಳೆ ಉಲ್ಲೇಖಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ಆಗುವ ಮೊದಲು ಕರ್ನಾಟಕ ಹೈಕೋರ್ಟ್‌ನಲ್ಲಿ ಅವರು ವಕೀಲಿಕೆ ಮಾಡಿದ್ದಾರೆ. ಅವರು ಅನುಭವಿ ನ್ಯಾಯಮೂರ್ತಿಯಾಗಿದ್ದು, ಕರ್ನಾಟಕ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ಗಳಲ್ಲಿ ಕೆಲಸ ಮಾಡಿರುವ ಆಡಳಿತಾತ್ಮಕ ಅನುಭವವಿದೆ ಎಂದು ಕೊಲಿಜಿಯಂ ಶಿಫಾರಸು ವೇಳೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.