ಚಂಡೀಗಢ: ಹರಿಯಾಣದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ಕರ್ನಾಟಕದಲ್ಲಿ ಆಡಳಿತ ನಡೆಸುವವರು ಪರಿಶಿಷ್ಟ ಸಮುದಾಯದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣದಲ್ಲೂ ಹಗರಣ ನಡೆಸಿದ್ದಾರೆ’ ಎಂದು ದೂರಿದರು.

‘ಕರ್ನಾಟಕ ಅಥವಾ ತೆಲಂಗಾಣದಲ್ಲಿ ಅಧಿಕಾರದಲ್ಲಿ ಇರುವ ಸರ್ಕಾರಗಳು ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ’ ಎಂದು ಆರೋಪಿಸಿದರು.

ಹರಿಯಾಣದಲ್ಲಿ ‘ಮೇರಾ ಬೂತ್, ಸಬ್ಸೆ ಮಜಬೂತ್’ ಕಾರ್ಯಕ್ರಮದಲ್ಲಿ ‘ನಮೋ ಆಪ್’ ಮೂಲಕ ಬಿಜೆಪಿ ಕಾರ್ಯಕರ್ತರ ಜತೆ ಅವರು ಗುರುವಾರ ಸಂವಾದ ನಡೆಸಿದರು.

‘ಕಾಂಗ್ರೆಸ್ನವರು ಬಹುತೇಕ ಸಮಯ ಆಂತರಿಕ ಕಚ್ಚಾಟದಲ್ಲಿಯೇ ಕಳೆಯುತ್ತಾರೆ. ಅಧಿಕಾರಕ್ಕಾಗಿ ಸುಳ್ಳುಗಳನ್ನು ಹೇಳಿ, ಜನರ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳುತ್ತಾರೆ’ ಎಂದು ಆರೋಪಿಸಿದ ಅವರು, ಹರಿಯಾಣದ ಜನರು ಬಿಜೆಪಿಗೆ ಇನ್ನೊಮ್ಮೆ ಅಧಿಕಾರ ನೀಡಲು ನಿರ್ಧರಿಸಿದ್ದಾರೆ ಎಂದರು.

10 ವರ್ಷಗಳಿಂದ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್, ಗರಿಷ್ಠ ಸಮಯವನ್ನು ಆಂತರಿಕ ಕಲಹದಲ್ಲಿಯೇ ಕಳೆದಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.