ನವದೆಹಲಿ:ಭ್ರಷ್ಟಾಚಾರವನ್ನು ಕ್ರಾಂತಿಯಾಗಿ ಪರಿವರ್ತಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರ ಟೀಕಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ.

ಇದನ್ನೂ ಓದಿ:ಚಿದಂಬರಂ, ಕಾರ್ತಿ ಹಾಗೂ ಐಎನ್‌ಎಕ್ಸ್: ಏನಿದು ಹಗರಣ?

ಸಿಬಿಐ, ಜಾರಿ ನಿರ್ದೇಶನಾಲಯಗಳನ್ನು (ಇ.ಡಿ) ಬಿಜೆಪಿ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ.ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಇತರ ಆರೋಪಿಗಳನ್ನು ಬಂದಿಸಲಾಗಿಲ್ಲ. ಆದರೆ ಚಿದಂಬರಂ ಅವರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ನಖ್ವಿ, ‘ಕಾಂಗ್ರೆಸ್ ಪಕ್ಷವು ನಕಾರಾತ್ಮಕ ಮನೋಭಾವ ಹೊಂದಿದೆ. ಅವರು ಭ್ರಷ್ಟಾಚಾರವನ್ನು ಕ್ರಾಂತಿಯನ್ನಾಗಿ ಮಾಡಿದ್ದಾರೆ. ಈವರೆಗೆ, ಕ್ರಾಂತಿ ಎಂಬುದು ಭ್ರಷ್ಟಾಚಾರಕ್ಕೆ ವಿರುದ್ಧವಾಗಿತ್ತು. ಈಗ ಭ್ರಷ್ಟಾಚಾರದ ಪರ ಕ್ರಾಂತಿ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು...

ಹಿಂದೊಮ್ಮೆ ತಾವೇ ಉದ್ಘಾಟಿಸಿದ್ದ ಸಿಬಿಐ ಕಚೇರಿಯಲ್ಲಿ ಬಂದಿಯಾದ ಚಿದಂಬರಂ

ಯಾರದೋ ತೃಷೆ ತಣಿಸಲು ನಡೆಸಿದ ಪ್ರಹಸನ: ಚಿದಂಬರಂ ಬಂಧನಕ್ಕೆ ಪುತ್ರ ಕಾರ್ತಿ ಆಕ್ರೋಶ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಸಿಬಿಐನಿಂದ ಚಿದಂಬರಂ ಸೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.