ನವದೆಹಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಸಂಜೆ ಪ್ರಕಟಿಸಿದೆ.

ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ರಾಹುಲ್ ಮಾಂಕೂಟತ್ತಿಲ್ ಹಾಗೂ ಚೆಲ್ಲಕ್ಕಾರ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪಟ್ಟಿ ಪ್ರಕಟಿಸಿದ್ದಾರೆ.

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನವೆಂಬರ್ 13ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು (ಬುಧವಾರ) ಪ್ರಕಟಿಸಿದೆ.

ಇದರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಕ್ಷೇತ್ರದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಯ್ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು.

ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧರಾಗಿದ್ದಾರೆ .

52 ವರ್ಷದ ಪ್ರಿಯಾಂಕಾ, ವಯನಾಡ್ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ. ವಯನಾಡ್ನಲ್ಲಿ ಪ್ರಿಯಾಂಕಾ ಗೆಲುವು ಸಾಧ್ಯವಾದರೆ, ಗಾಂಧಿ ಕುಟುಂಬದಿಂದ ಮೂವರು ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.