ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಶುಭಾಂಕರ್ ಸರ್ಕಾರ್ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಚುನಾವಣೆ ಬಳಿಕ ಅಧೀರ್ ರಂಜನ್ ಚೌಧರಿ ಅವರು ಪಶ್ಚಿಮ ಬಂಗಾಳ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ಪಕ್ಷದ ರಾಜ್ಯ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿತ್ತು.

ಶುಭಾಂಕರ್ ಸರ್ಕಾರ್ ಅವರನ್ನು ರಾಜ್ಯಾಧ್ಯಕರಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ್ ಅವರನ್ನು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕ ಮಾಡಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ನಿರ್ಗಮಿತ ಪಿಸಿಸಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಕೊಡುಗೆಯನ್ನು ಪಕ್ಷವು ಸ್ಮರಿಸುತ್ತದೆ ಎಂದೂ ತಿಳಿಸಲಾಗಿದೆ.

ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ತೃಣಮೂಲ ಕಾಂಗ್ರೆಸ್ ಜೊತೆಗಿನ ಬಾಂಧವ್ಯದಲ್ಲಿ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ಪ್ರತಿಕ್ರಿಯೆ ಕೇಳಿತ್ತು.

ಅಧೀರ್ ರಂಜನ್ ಚೌಧರಿ ಅವರ ಕೇಂದ್ರ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ರಾಜ್ಯ ಮಟ್ಟದಲ್ಲಿ ಟಿಎಂಸಿ ನಾಯಕರ ನಡುವೆ ಭಿನ್ನಾಭಿಪ್ರಾಯ ಹೊಂದಿದ್ದರು ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.