ಪಣಜಿ: ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್‌ಫ್‌ಐ)ನಲ್ಲಿ ಕೊಂಕಣಿ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡದಿರುವ ಗೋವಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 50ನೇ ಚಿತ್ರೋತ್ಸವಕ್ಕೆ ಅಡ್ಡಿಪಡಿಸುವ ಬೆದರಿಕೆಯನ್ನೂ ಹಾಕಿದೆ.

‘15 ವರ್ಷಗಳಿಂದ ಇಲ್ಲಿ ನಡೆಯುತ್ತಿರುವ ಚಿತ್ರೋತ್ಸವದಿಂದ ರಾಜ್ಯಕ್ಕೆ ಹಾಗೂ ಕೊಂಕಣಿ ಭಾಷೆಯ ಚಿತ್ರಗಳಿಗೆ ಯಾವ ರೀತಿ ಲಾಭವಾಗಿದೆ ಎಂದು ಸ್ಪಷ್ಟಪಡಿಸಬೇಕು ಹಾಗೂ ಈ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದೂ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಕಾಂಗ್ರೆಸ್ ಆಗ್ರಹಿಸಿದೆ.

ಗೋವಾ ಮನರಂಜನಾ ಸಂಸ್ಥೆ (ಇಎಸ್‌ಜಿ) ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದ್ದು, ಇದರಿಂದ ಕೊಂಕಣಿ ಭಾಷೆಯ ಚಿತ್ರ ನಿರ್ಮಾಪಕರು ಸಾಕಷ್ಟು ಸವಾಲು ಎದುರಿಸಬೇಕಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸ್ವಾತಿ ಕೇರ್ಕರ್ ಆರೋಪಿಸಿದ್ದಾರೆ.

‘ಕೊಂಕಣಿ ಚಿತ್ರಗಳಿಗೆ ಮಾತೃ ಸ್ಥಾನ ನೀಡಬೇಕು ಹಾಗೂ ಹಲವು ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದೂ ಕಾಂಗ್ರೆಸ್ ಆಗ್ರಹಿಸಿದೆ.

‘ಕೊಂಕಣಿ ಚಿತ್ರಗಳಿಗೆ ಅವಕಾಶ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಸಹ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.