ಕಾಲಿಯಾಚಕ್: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳು ಬಿಜೆಪಿಯನ್ನು ಬೆಂಬಲಿಸುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಟಿಎಂಸಿ ಹೋರಾಡಲಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ರಾಷ್ಟ್ರೀಯವಾಗಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಟಿಎಂಸಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಹೇಳಿದ್ದಾರೆ.

‘ನಾವು ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಹೊಂದಿಲ್ಲ. ಸಿಪಿಐ(ಎಂ) ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎರಡು ಪಕ್ಷಗಳು ಬಿಜೆಪಿಯೊಂದಿಗೆ ಕೈ ಜೋಡಿಸಿವೆ. ನೀವು (ಮತದಾರರು) ಕಾಂಗ್ರೆಸ್ ಅಥವಾ ಸಿಪಿಐ(ಎಂ) ಎರಡರಲ್ಲಿ ಯಾವ ಪಕ್ಷಕ್ಕೆ ಮತ ನೀಡಿದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹಾಯ ಮಾಡಿದಂತಾಗುತ್ತದೆ. ಏಕೆಂದರೆ ರಾಜ್ಯದಲ್ಲಿ ಈ ಎರಡು ಪಕ್ಷಗಳು ಬಿಜೆಪಿಯ ಎರಡು ಕಣ್ಣುಗಳಾಗಿವೆ’ ಎಂದು ಅವರು ತಿಳಿಸಿದ್ದಾರೆ.

ಬಂಗಾಳದಲ್ಲಿ ಸಿಪಿಐ(ಎಂ) ಜತೆ ಯಾವುದೇ ಸಂಪರ್ಕ ಹೊಂದಬಾರದು ಎಂಬ ಷರತ್ತಿನೊಂದಿಗೆ ಕಾಂಗ್ರೆಸ್ ಜತೆ ಸೀಟು ಹಂಚಿಕೆಯ ಕುರಿತು ಚರ್ಚಿಸಲು ಟಿಎಂಸಿ ಬಯಸಿತ್ತು. ಆದರೆ ಅವರು ಕೇಳಲಿಲ್ಲ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಮಮತಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ನಾಯಕರು ಬಿಜೆಪಿಯ ಪರವಾಗಿ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಟಿಎಂಸಿ ನಡೆಸುತ್ತಿರುವ ಸರ್ಕಾರದ ಜನಪರ ನೀತಿಗಳ ವಿರುದ್ಧ ಸಂಚು ರೂಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.