ಮುಂಬೈ: ಹಿಂದುತ್ವ ಸಿದ್ಧಾಂತವಾದಿ ವಿ.ಡಿ ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪೋಸ್ಟರ್ಗೆ ಪಾದರಕ್ಷೆಗಳಿಂದ ಹೊಡೆದಿದ್ದಕ್ಕಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಶಿವಸೇನೆ ಸದಸ್ಯರನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಇದರ ಪರಿಣಾಮ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲದ ವಾತಾವರಣ ಕಂಡುಬಂದಿತು.

ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸದಸ್ಯರು ಗುರುವಾರ ಮಹಾರಾಷ್ಟ್ರ ವಿಧಾನ ಮಂಡಲದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪೋಸ್ಟರ್ಗೆ ಚಪ್ಪಲಿಯಿಂದ ಹೊಡೆದಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಘೋಷಣೆಗಳನ್ನು ಕೂಗಿದ್ದರಿಂದ ಕೋಲಾಹಲ ಉಂಟಾಗಿ ಸದನವನ್ನು ಮೂರು ಬಾರಿ ಮುಂದೂಡಲಾಯಿತು.

ದಿನದ ಸದನ ಕಲಾಪಗಳು ಪ್ರಾರಂಭವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಟೋಲೆ, ಗಾಂಧಿಯವರ ಪೋಸ್ಟರ್ಗಳಿಗೆ ಪಾದರಕ್ಷೆಗಳಿಂದ ಹೊಡೆದ ಖಜಾನೆ ಪೀಠದ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಬೇಡಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ರಾಹುಲ್ ನಾರ್ವೇಕರ್, ಶಾಸಕಾಂಗ ಸಂಕೀರ್ಣದಲ್ಲಿನ ಬೆಳವಣಿಗೆಗಳ ವರದಿಯನ್ನು ಕೇಳಿದ್ದು, ವಿಡಿಯೊ ದೃಶ್ಯಾವಳಿಗಳನ್ನು ಪಡೆಯುವುದಾಗಿ ಹೇಳಿದರು.

'ನಾನು ವಿಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ನಂತರ ನನ್ನ ಆದೇಶ ನೀಡುತ್ತೇನೆ. ನಾನು ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಹೋಗುವುದಿಲ್ಲ’ ಎಂದು ಸಿಕ್ಪರ್ ಹೇಳಿದರು. ಇದರಿಂದ ಕೆರಳಿದ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು.’

ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಲ್ಲೇಖಿಸಿದ್ದಕ್ಕೆ ಸಂಸ್ಕೃತಿ ಸಚಿವ ಸುಧೀರ್ ಮುಂಗಂಟಿವಾರ್ ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸಿನ ಸದಸ್ಯರು ಹೇಳಿರುವುದು ದಾಖಲೆಯಾಗುವುದಿಲ್ಲ ಎಂದು ನಾರ್ವೇಕರ್ ಹೇಳಿದರು. ಪ್ರಧಾನಿ ಮೋದಿ ವಿರುದ್ಧ ಏನನ್ನೂ ಸಹಿಸುವುದಿಲ್ಲ ಎಂದು ಆಡಳಿತ ಸದಸ್ಯರು ಹೇಳಿದರು.

ಎರಡೂ ಪಕ್ಷದವರು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪರ ಮತ್ತು ವಿರೋಧವಾಗಿ ಘೋಷಣೆಗಳನ್ನು ಕೂಗಿದರು. ಗದ್ದಲದಿಂದಾಗಿ ಸದನವನ್ನು ಮೂರು ಬಾರಿ ಮುಂದೂಡಲಾಯಿತು.

ಇವನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರೇಣುಕಾ ಚೌಧರಿ ನಿರ್ಧಾರ

ಜಾರ್ಖಂಡ್ | ನವಜಾತ ಶಿಶು ₹4.5 ಲಕ್ಷಕ್ಕೆ ಮಾರಾಟ, ತಾಯಿ ಸೇರಿ 11 ಮಂದಿ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.