ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಾಸಕ ಗಡ್ಡಂ ಪ್ರಸಾದ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಹೈಕಮಾಂಡ್ ನಾಮನಿರ್ದೇಶನ ಮಾಡಿತು. ಇದರ ಭಾಗವಾಗಿ ಗಡ್ಡಂ ಪ್ರಸಾದ್ ಕುಮಾರ್ ಅವರು ಸ್ಪೀಕರ್ ಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳನ್ನು ಬುಧವಾರ ವಿಧಾನಸಭಾ ಕಾರ್ಯದರ್ಶಿಗೆ ಸಲ್ಲಿಸಿದ್ದರು.

ಸ್ಪೀಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ಕಾಂಗ್ರೆಸ್ ನಾಯಕರು ಎಲ್ಲಾ ಪಕ್ಷಗಳನ್ನು ಕೇಳಿಕೊಂಡಿದ್ದರು. ಬಿಜೆಪಿ ಹೊರತುಪಡಿಸಿ ಬಿಆರ್‌ಎಸ್, ಎಐಎಂಐಎಂ ಹಾಗೂ ಸಿಪಿಐ ಪಕ್ಷಗಳು ಸಹಮತ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಆಯ್ಕೆ ಸರ್ವಾನುಮತದಿಂದ ನಡೆಯಿತು.

ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ನೂತನ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
.ತೆಲಂಗಾಣ: 100 ದಿನಗಳಲ್ಲಿ ₹500ಕ್ಕೆ ಎಲ್ಪಿಜಿ ಸಿಲಿಂಡರ್; ಸಚಿವ ಉತ್ತಮ್ ಕುಮಾರ್.ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.