ನವದೆಹಲಿ: ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳನ್ನು ವಿಶ್ಲೇಷಿಸುವ ಬದಲು ಭಾರತೀಯ ಸಂಸ್ಕೃತಿ ಮತ್ತು ಅಸ್ಮಿತೆಯನ್ನು ಅವಮಾನಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸನಾತನ ಧರ್ಮದ ಬಗೆಗಿನ ಟೀಕೆಗಳು ನಡೆಯುತ್ತಿದ್ದರೂ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರತಿಕ್ರಿಯಿಸುತ್ತಿಲ್ಲ ಎಂದರೆ, ಅದಕ್ಕೆ ಅವರ ಅನುಮತಿ ಇರಲೇಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 'ವಸುದೈವ ಕುಟುಂಬಕಂ' ಸಂದೇಶವನ್ನು ಸಾರುತ್ತಿದ್ದಾರೆ. ಆದರೆ, ಪ್ರತಿಪಕ್ಷಗಳು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಇಲ್ಲಸಲ್ಲದ ಕಾರಣಗಳನ್ನು ಹುಡುಕುತ್ತಾ ದೇಶದ ಸಂಸ್ಕೃತಿ ಮತ್ತು ಅಸ್ಮಿತೆಯನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ನಾಯಕರು ಜಾತಿ ಮತ್ತು ಧರ್ಮದ ಸಮಸ್ಯೆಗಳನ್ನು ಉಲ್ಬಣಗೊಳಿಸಲು ನೋಡಿದರು. ಅದು ನಡೆಯದಿದ್ದಾಗ ಈಗ , ಉತ್ತರ-ದಕ್ಷಿಣ ವಿಭಜನೆಯ ಜಪ ಆರಂಭಿಸಿದ್ದಾರೆ ಎಂದರು.

'ಹಿಂದಿ, ಹಿಂದೂಗಳು ಮತ್ತು ಸನಾತನ ಧರ್ಮವನ್ನು ಅವಮಾನಿಸುತ್ತಿರುವ ಡಿಎಂಕೆಯೊಂದಿಗೆ ಸೇರಿಕೊಳ್ಳಲು ಕಾಂಗ್ರೆಸ್ ತುಡಿಯುತ್ತಿದೆ‘ ಎಂದು ಠಾಕೂರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.