ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಲಿತ ರಾಜ್ಯಪಾಲರಿಗೆ ಕಾಂಗ್ರೆಸ್‌ ಅವಮಾನ: ವಿ. ಸೋಮಣ್ಣ ಕಿಡಿ

Published : 19 ಆಗಸ್ಟ್ 2024, 11:37 IST
Last Updated : 19 ಆಗಸ್ಟ್ 2024, 11:37 IST
ಫಾಲೋ ಮಾಡಿ
Comments

ನವದೆಹಲಿ: ’ಮುಡಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್‌ ಗೆಹಲೋತ್ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್‌ ಪಕ್ಷವು ದಲಿತರಿಗೆ ಅವಮಾನ ಮಾಡುತ್ತಿದೆ’ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕಿಡಿಕಾರಿದರು. 

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಸಮುದಾಯದ ಗೆಹಲೋತ್ ಅವರು ಈ ಹಿಂದೆ ಅನೇಕ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅನುಭವಿ. ಅಲ್ಲದೆ, ಅವರು ರಾಜ್ಯದ ಮುಖ್ಯಸ್ಥರು. ಅವರ ವಿರುದ್ಧ ಪ್ರತಿಭಟನೆ ನಡೆಸುವುದು ಸರಿಯಲ್ಲ. ದಲಿತರ ಪರ ಎಂದು ಕಾಂಗ್ರೆಸ್‌ ಪಕ್ಷವು ಬಿಂಬಿಸಿಕೊಳ್ಳುತ್ತಿದೆ. ಇನ್ನೊಂದೆಡೆ, ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದೆ. ಇದು ಕಾಂಗ್ರೆಸ್‌ನ ದ್ವಂದ್ವ ನಿಲುವು’ ಎಂದು ಟೀಕಿಸಿದರು. 

‘ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನ್ಯಾಯಾಲಯಕ್ಕೆ ಹೋಗಿ ಕಾನೂನುಬದ್ಧವಾಗಿ ಹೋರಾಟ ಮಾಡಲಿ. ನ್ಯಾಯಾಲಯದಲ್ಲಿ ತೀರ್ಮಾನ ಆದ ಮೇಲೆ ಮತ್ತೆ ಮುಖ್ಯಮಂತ್ರಿ ಆಗಲಿ. ಆದರೆ, ಆಡಳಿತ ನಡೆಸುವವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಸಹ್ಯಕರವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT